ಶ್ರೀಮಂಗಲ, ಮಾ. 21: ಪ್ರತಿಯೊಬ್ಬ ವ್ಯಕ್ತಿಯ ಬದುಕನ್ನು ರೂಪಿಸುವದು ಪ್ರಾಥಮಿಕ ಹಂತ. ಆದ್ದರಿಂದ ಪೋಷಕರು ಹಾಗೂ ಶಿಕ್ಷಕರು ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿ ಸಂಸ್ಕಾರ ಕಲಿಸಲು ಒತ್ತು ನೀಡಬೇಕು ಎಂದು ಮಡಿಕೇರಿ ಆಕಾಶವಾಣಿ ಉದ್ಘೋಷಕ ಚೆಟ್ಟಂಗಡ ರವಿ ಸುಬ್ಬಯ್ಯ ಕಿವಿಮಾತು ಹೇಳಿದರು. ತಾವಳಗೇರಿ ಮೂಂದ್ ನಾಡ್ ಕೊಡವ ಸಮಾಜದ ಸಭಾಂಗಣದಲ್ಲಿ ಟಿ. ಶೆಟ್ಟಿಗೇರಿ ರೂಟ್ಸ್ ವಿದ್ಯಾಸಂಸ್ಥೆಯ ಪ್ಲೇ ಹೋಂ ಮಕ್ಕಳಿಗೆ ನಡೆಸಿದ ವಿಶೇಷ ಚಟುವಟಿಕೆ ಹಾಗೂ ಪದವಿ ಪ್ರದಾನ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಉತ್ತಮ ಸಮಾಜ ನಿರ್ಮಾಣ ಮಾಡಲು ಸುಸಂಸ್ಕøತ ವ್ಯಕ್ತಿತ್ವದ ಮಕ್ಕಳನ್ನು ಸಮಾಜಕ್ಕೆ ನೀಡುವದು ಪೋಷಕರು ಹಾಗೂ ಶಿಕ್ಷಕರ ಜವಾಬ್ದಾರಿ ಯಾಗಿದ್ದು, ಪೋಷಕರು ಮಕ್ಕಳ ಬಗ್ಗೆ ಪ್ರಾಥಮಿಕ ಹಂತದಿಂದಲೇ ಹೆಚ್ಚಿನ ಗಮನ ನೀಡಬೇಕಾಗುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೂಟ್ಸ್ ವಿದ್ಯಾಸಂಸ್ಥೆಯ ಅಧ್ಯಕ್ಷ ಮಲ್ಲಂಗಡ ನಿರನ್ ಉತ್ತಪ್ಪ ಮಾತನಾಡಿ, ಮಕ್ಕಳಲ್ಲಿ ಪ್ರಾಥಮಿಕ ಹಂತದಿಂದಲೇ ಧೈರ್ಯ ಹಾಗೂ ಭರವಸೆ ಹುಟ್ಟಿಸಲು ಈ ರೀತಿಯ ವಿನೂತನ ಕಾರ್ಯಕ್ರಮವೊಂದನ್ನು ಆರಂಭಿಸಿದ್ದು ಮುಂದಿನ ವರ್ಷಗಳಲ್ಲಿ ಪ್ಲೇ ಹೋಂನೊಂದಿಗೆ ಎಲ್.ಕೆ.ಜಿ., ಯು.ಕೆ.ಜಿ.ಗಳಿಗೂ ವಿಸ್ತರಿಸ ಲಾಗುವದು ಎಂದರು.