ಮಡಿಕೇರಿ, ಮಾ. 21: ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗ ಪ್ರತಿ ತಿಂಗಳು ನಡೆಸುತ್ತಿರುವ ಸಾಹಿತ್ಯ ಸಂವಾದ ಕಾರ್ಯಕ್ರಮವು ಈ ಬಾರಿ ಡಿವಿಜಿಯವರ ‘ಮಂಕುತಿಮ್ಮನ ಕಗ್ಗ’ದ ಕುರಿತು ಪ್ರವಚನ ನಡೆಯಲಿದೆ. ಕೊಡಗು ಪತ್ರಿಕಾ ಭವನ ಟ್ರಸ್ಟ್ ಮತ್ತು ಭಾರತೀಯ ವಿದ್ಯಾಭವನ, ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿಯ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ತಾ. 23 ರಂದು ಸಂಜೆ 5.30 ಕ್ಕೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಶಿವಮೊಗ್ಗದ ಪ್ರವಚನಕಾರ ಜಿ.ಎಸ್. ನಟೇಶ್ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮವನ್ನು ಭಾರತೀಯ ವಿದ್ಯಾಭವನದ ಅಧ್ಯಕ್ಷÀ ಕೆ.ಎಸ್. ದೇವಯ್ಯ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ವಹಿಸಲಿದ್ದು, ಕೊಡಗು ಪತ್ರಿಕಾ ಭವನ ಟ್ರಸ್ಟ್‍ನ ಮೇನೇಜಿಂಗ್ ಟ್ರಸ್ಟಿ ಬಿ.ಎನ್. ಮನುಶೆಣೈ, ಕೊಡಗು ಜಾನಪದ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಎಸ್.ಐ. ಮುನೀರ್ ಅಹ್ಮದ್, ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಉಪಾಧ್ಯಕ್ಷ ಎಂ.ಇ. ಮೊಹಿದ್ದೀನ್, ಆಡಳಿತ ಮಂಡಳಿ ಸದಸ್ಯರಾದ ಅಂಬೆಕಲ್ ನವೀನ್ ಕುಶಾಲಪ್ಪ ಉಪಸ್ಥಿತರಿರುತ್ತಾರೆ.