ಮಡಿಕೇರಿ, ಮಾ. 23: ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಚುನಾವಣಾ ವೆಚ್ಚ ವೀಕ್ಷಕ ಸಂದೀಪ್ ಕುಮಾರ್ ಮಿಶ್ರ ಜಿಲ್ಲಾಧಿಕಾರಿಯವರ ಕಚೇರಿಯ ಮಾಧ್ಯಮ ಜಾಹೀರಾತು ದೃಢೀಕರಣ ಮತ್ತು ಮೇಲ್ವಿಚಾರಣಾ ಸಮಿತಿಗೆ (ಎಂಸಿಎಂಸಿ) ಭೇಟಿ ನೀಡಿ ಪರಿಶೀಲಿಸಿದರು.

ಮಾಧ್ಯಮ ದೃಢೀಕರಣ ಮತ್ತು ಮೇಲ್ವಿಚಾರಣಾ ಸಮಿತಿ ಕಾರ್ಯ ಚಟುವಟಿಕೆ ಸಂಬಂಧಿಸಿದಂತೆ ಮಾಹಿತಿ ಪಡೆದ ವೀಕ್ಷಕರು ಸ್ಥಳೀಯ ವಾಹಿನಿಗಳು ಮತ್ತು ಪತ್ರಿಕೆಗಳಲ್ಲಿ ಪ್ರಕಟವಾಗುವ ಜಾಹೀರಾತುಗಳ ವೆಚ್ಚ ಹಾಗೂ ಸಾಮಾಜಿಕ ಜಾಲ ತಾಣಗಳಲ್ಲಿ ಪ್ರಚಾರವಾಗುವ ಮಾಹಿತಿ ಹಾಗೂ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ಮಾಹಿತಿ ಪಡೆದರು.

ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಯೋಗೇಶ್, ವಾರ್ತಾಧಿಕಾರಿ ಚಿನ್ನಸ್ವಾಮಿ, ಉದ್ಯೋಗ ವಿನಿಮಯಾಧಿಕಾರಿ ಸಿ. ಜಗನ್ನಾಥ ಎಂಸಿಎಂಸಿ ಕಾರ್ಯ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು. ಸಮಿತಿ ಸದಸ್ಯರಾದ ಕೆಂಚಪ್ಪ, ಸುಧಾ, ಶ್ರೀದೇವಿ, ಬಿ.ಕೆ. ಸತೀಶ್ ಇತರರು ಇದ್ದರು.