ಮಡಿಕೇರಿ, ಮಾ. 23: ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಶನಿವಾರ ನಗರದ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ಕೊಡವ ಹೆರಿಟೇಜ್ ಕೇಂದ್ರ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿ ಮಾಹಿತಿ ಪಡೆದರು. ಬಳಿಕ ಮಾಕುಟ್ಟ ಹಾಗೂ ಪೆರಂಬಾಡಿ ಚೆಕ್‍ಪೋಸ್ಟ್‍ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.