ಗೋಣಿಕೊಪ್ಪಲು, ಮಾ. 23: ಇಲ್ಲಿನ ಕಾವೇರಿ ಕಾಲೇಜಿನ ಅರ್ಥಶಾಸ್ತ್ರ ಸ್ನಾತಕೋತ್ತರ ವಿಭಾಗದಿಂದ ತಾ. 25 ರಂದು ರಾಜ್ಯಮಟ್ಟದ ಅರ್ಥಶಾಸ್ತ್ರ ಹಬ್ಬ ಆಚರಿಸಲಾಗುತ್ತಿದ್ದು, ಕಾಲೇಜಿನ ಚೆಕ್ಕೇರ ಮುತ್ತಣ್ಣ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ರಾಜ್ಯದ ಬಿ.ಎ. ಪದವಿ ವಿದ್ಯಾರ್ಥಿಗಳಿಗೆ ಜನಪದ ನೃತ್ಯ, ಕಿರು ಪ್ರಹಸನ, ಮಾದರಿ ಪ್ರದರ್ಶನ, ರಸಪ್ರಶ್ನೆ ಹಾಗೂ ನಿಧಿಶೋಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಗೋಣಿಕೊಪ್ಪಲು ಕಾವೇರಿ ಎಜುಕೇಷನ್ ಸೊಸೈಟಿ ಅಧ್ಯಕ್ಷ ಡಾ.ಎ.ಸಿ. ಗಣಪತಿ, ಮಚ್ಚಮಾಡ ಅನೀಶ್ ಮುದ್ದಪ್ಪ, ವೀರಾಜಪೇಟೆ ಕಾವೇರಿ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಎ.ಎಂ. ಕಮಲಾಕ್ಷಿ, ಕಾವೇರಿ ಎಜುಕೇಷನ್ ಸೊಸೈಟಿ ನಿರ್ದೇಶಕಿ ಡಾ. ಪೊನ್ನಮ್ಮ ಮಾಚಯ್ಯ, ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಟಿ.ಕೆ. ಬೋಪಯ್ಯ ಹಾಗೂ ಸಾದೆರ ಮಧು ಗಣಪತಿ ಭಾಗವಹಿಸಲಿದ್ದಾರೆ ಎಂದು ಪ್ರಾಂಶುಪಾಲೆ ಪ್ರೊ. ಎಸ್.ಆರ್. ಉಷಾಲತ ತಿಳಿಸಿದ್ದಾರೆ.