ಗೋಣಿಕೊಪ್ಪ ವರದಿ, ಮಾ. 23: ಹಳ್ಳಿಗಟ್ಟು ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜು ರೋಟ್ರಕ್ಟ್ ಕ್ಲಬ್, ಎನ್.ಎಸ್.ಎಸ್. ಘಟಕ, ರೆಡ್‍ರಿಬನ್ ಕ್ಲಬ್ ಹಾಗೂ ಗೋಣಿಕೊಪ್ಪ ರೋಟರಿ ಕ್ಲಬ್ ಸಹಯೋಗದಲ್ಲಿ ಹಳ್ಳಿಗಟ್ಟು ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ‘ಮಹಾದಾನ್ 4.0’ ರಕ್ತದಾನ ಶಿಬಿರದಲ್ಲಿ ಸುಮಾರು 105 ದಾನಿಗಳು ರಕ್ತದಾನ ಮಾಡಿದರು.

ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಹಾಗೂ ಸಾರ್ವಜನಿಕರು ಪಾಲ್ಗೊಂಡರು. ಈ ಸಂದರ್ಭ ವಿದ್ಯಾರ್ಥಿಗಳಲ್ಲಿ ರಕ್ತದಾನದ ಬಗ್ಗೆ ಅರಿವು ಮೂಡಿಸಲಾಯಿತು. ಪ್ರಾಂಶುಪಾಲ ಡಾ. ಪಿ.ಸಿ. ಕವಿತ, ರೋಟರಿ ಕ್ಲಬ್ ಅಧ್ಯಕ್ಷ ಪಾರುವಂಡ ದಿಲನ್ ಚಂಗಪ್ಪ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರೊ. ಎನ್.ಎಸ್. ಸುಜಿತ್ ಇವರುಗಳು ರೆಡ್‍ರಿಬನ್ ಕ್ಲಬ್ ವೈದ್ಯ ಡಾ. ಸತೀಶ್ ಹಸ್ತಾಂತರಿಸಲಾಯಿತು.