ಮಡಿಕೇರಿ, ಮಾ. 23: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಮಹಿಳಾ ಘಟಕ ‘ಮಾನಿನಿ’ ವತಿಯಿಂದ ಅಂತರ್ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಲೇಖಕಿಯರ ಬಳಗದ ಅಧ್ಯಕ್ಷೆ ಕಸ್ತೂರಿ ಗೋವಿಂದಮಯ್ಯ ಭಾಗವಹಿಸಿದ್ದರು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು ಪುರಾಣ ಕಾಲದಿಂದ ಇಲ್ಲಿಯವರೆಗಿನ ಸ್ತ್ರೀಯ ಸ್ಥಾನಮಾನಗಳನ್ನು ತಿಳಿಸಿದರು.
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಚಿತ್ರಾ ವೈ. ವಹಿಸಿಕೊಂಡಿದ್ದರು. ಸಂಚಾಲಕಿ ಮುತ್ತಮ್ಮ ಕೆ.ಕೆ. ಸ್ವಾಗತಿಸಿ, ಚಂದ್ರಕಲಾ ಎಂ.ಎಸ್. - ಸಹಾಯಕ ಪ್ರಾಧ್ಯಾಪಕರು ವಂದಿಸಿದರು. ಕಾರ್ಯಕ್ರಮವನ್ನು ಕುಸುಮಾ ಕೆ.ಪಿ. - ಸಹಾಯಕ ಪ್ರಾಧ್ಯಾಪಕರು ನಿರೂಪಿಸಿದರು. ಕಾಲೇಜಿನ ಎಲ್ಲಾ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.