ನಾಪೋಕ್ಲು, ಮಾ. 23: ನಾಪೋಕ್ಲು ಉತ್ತಮ ಪ್ರದೇಶವಾಗಿದ್ದು, ಇಂತಹ ಸ್ಥಳದಲ್ಲಿ ಕಾಲೇಜು ಇರುವದು ವಿದ್ಯಾರ್ಥಿಗಳು ಜೀವನದಲ್ಲಿ ಮುಂದೆ ಬರಲು ಸಹಕಾರಿ ಎಂದು ಗೋಣಿ ಕೊಪ್ಪ ಕಾವೇರಿ ಪದವಿ ಕಾಲೇಜಿನ ಪ್ರಾಧ್ಯಾಪಕಿ ಡಾ. ರೇಖಾ ವಸಂತ್ ಹೇಳಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾ ರಂಭದಲ್ಲಿ ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು ಅವರು ಮಾತನಾಡಿದರು. ಕೆನರಾ ಬ್ಯಾಂಕ್ ವ್ಯವಸ್ಥಾಪಕಿ ಸಫಿನ್ಸ ಕೆ.ವಿ. ಮಾತನಾಡಿ, ವಿದ್ಯಾರ್ಥಿಗಳು ಉದಯೋನ್ಮುಖ ಪ್ರತಿಭೆಗಳು ತಮ್ಮ ತಮ್ಮ ಪ್ರತಿಭೆಗಳನ್ನು ಅರಿತು ಓದಿನಲ್ಲೂ ಮುಂದುವರಿಯಬೇಕು ಎಂದರು. ಕುಂಡ್ಯೋಳಂಡ ರಮೇಶ್ ಮುದ್ದಯ್ಯ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಬಿದ್ದಾಟಂಡ ರಮೇಶ್ ಚೆಂಗಪ್ಪ ಉಪಸ್ಥಿತರಿದ್ದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಡಾ. ಎನ್.ಪಿ. ಕಾವೇರಿ ವಹಿಸಿದ್ದರು. 2018-19 ರ ಸಾಲಿನ ಕ್ರೀಡಾ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.
ಸಾಂಸ್ಕøತಿಕ ಕಾರ್ಯಕ್ರಮ ಸಂಚಾಲಕ ಕೆಂಬಡತಂಡ ಮುದ್ದಪ್ಪ, ಕ್ರೀಡಾ ಸಂಚಾಲಕ ಬಿ.ಎಸ್. ವಿನೋದ್, ಸಹಾಯಕ ಪ್ರಾಧ್ಯಾಪಕರಾದ ಮನೋಜ್‍ಕುಮಾರ್, ಹೆಚ್.ಎನ್. ನಂದೀಶ್, ಕೆ. ಅರವಿಂದ ಮಿತ್ರ, ಲೀನಾ, ಕವನ, ಕವಿತ, ನಿಲನ್, ಯಶೋಧ, ಗೌರಮ್ಮ, ಗೀತಾ, ಮಂಜುಳ ಮತ್ತಿತರರು ಉಪಸ್ಥಿತರಿದ್ದರು.