ಮಡಿಕೇರಿ, ಮಾ.24 : ಭಾರತೀಯ ಜನತಾ ಪಾರ್ಟಿ ಕಾಂಗ್ರೆಸ್ ಪರ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕುವ ಹುನ್ನಾರದಲ್ಲಿ ತೊಡಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಕೆÀ.ಮಂಜುನಾಥ್ ಕುಮಾರ್ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಕ್ಷೇತ್ರ ಸೇರಿದಂತೆ ಈ ಭಾಗದ ಲೋಕಸಭಾ ಕ್ಷೇತ್ರದಲ್ಲಿ 16 ಬಾರಿ ನಡೆದ ಲೋಕಸಭಾ ಚುನಾವಣೆಯಲ್ಲಿ 13 ಬಾರಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲವು ಸಾಧಿಸಿದ್ದಾರೆ. ಈ ಬಾರಿಯೂ ಗೆಲವು ಸಾಧಿಸುವ ಭಯ ಮೂಡಿರುವದರಿಂದ ಬಿಜೆಪಿ ವಾಮಮಾರ್ಗವನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದರು.

ಈ ಬಗ್ಗೆ ಈಗಾಗಲೆ ಚುನಾವಣಾಧಿಕಾರಿಗಳಿಗೆ ಮತ್ತು ಚುನಾವಣಾ ನೀತಿ ಸಂಹಿತೆಗೆ ಸಂಬಂಧಿಸಿದ ಎಲ್ಲಾ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಚುನಾವಣಾಧಿಕಾರಿಗಳು ಸಮಗ್ರ ತನಿಖೆ ನಡೆಸಬೇಕೆಂದು ಅವರು ಒತ್ತಾಯಿಸಿದರು.

ಕಾಂಗ್ರೆಸ್ ನಡೆಸಿದ ಸಮೀಕ್ಷೆ ಪ್ರಕಾರ ಪ್ರತಿ ಬೂತ್‍ನಲ್ಲಿ 50 ರಿಂದ 100 ಕಾಂಗ್ರೆಸ್ ಮತದಾರರ ಹೆಸರು ತೆಗೆದು ಹಾಕಲಾಗುತ್ತಿದೆ. ಕುಶಾಲನಗರ ಬಳಿಯ ನಿಲುವಾಗಿಲು ಬೂತ್ ವ್ಯಾಪ್ತಿಯಲ್ಲಿ 100, ವೀರಾಜಪೆÉೀಟೆಯ ಬೇಟೋಳಿ ವ್ಯಾಪ್ತಿಯಲ್ಲಿ 100, ಹೈಸೊಡ್ಲೂರು ಗ್ರಾಮದಲ್ಲಿ 50 ಕ್ಕೂ ಅಧಿಕ ಮತದಾರರ ಹೆಸರನ್ನು ಕೈಬಿಡಲಾಗಿದೆ. ಒಂದು ಪ್ರದೇಶದಲ್ಲಿ 6 ತಿಂಗಳಿಗಿಂತ ಹೆಚ್ಚು ಕಾಲ ನೆಲೆ ನಿಂತಿರುವ ಮತದಾರರ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಬೆÉೀಕೆನ್ನುವ ನಿಯಮವಿದೆ. ಆದರೆ, ನಿಯಮವನ್ನು ತಿರುಚಿ ಕಾಂಗ್ರೆಸ್ ಮತದಾರರಿಗೆ ಇರುವ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಮಂಜುನಾಥ್ ಕುಮಾರ್ ಆರೋಪಿಸಿದರು.

ಕೊಡಗಿನಲ್ಲಿ ಅಪರಾಧ ಪ್ರಕರಣಗಳು ಕಡಿಮೆ ಇದ್ದರು ಚುನಾವಣಾ ಅಧಿಕಾರಿಗಳು ಟಾರ್ಗೆಟ್ ನೀಡಿದ್ದಾರೆ ಎನ್ನುವ ಕಾರಣಕ್ಕಾಗಿ ಅಮಾಯಕರನ್ನು ರೌಡಿ ಶೀಟರ್ ಲಿಸ್ಟ್‍ಗೆ ಸೇರಿಸಿ ಗÀಡಿಪಾರು ಮಾಡುವ ಕ್ರಮಗಳು ನಡೆಯುತ್ತಿದೆ. ಈ ಅಮಾಯಕರಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೂಡ ಸೇರಿಕೊಂಡಿದ್ದು, ಪೊಲೀಸರ ಕ್ರಮವನ್ನು ವಿರೋಧಿಸುವದಾಗಿ ಮಂಜುನಾಥ್ ಕುಮಾರ್ ತಿಳಿಸಿದರು.

ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ವಿಜಯಶಂಕರ್ ತಾ. 25 ರಂದು ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಅಂದು ಬೆಳಿಗ್ಗೆ 10.30 ಗಂಟೆಗೆ ದೇವಾಲಯದಲ್ಲಿ ಪೂಜೆ ಸಲ್ಲಿಸಿ 12 ಗಂಟೆಗೆ ನಾಮಪತ್ರ ಸಲ್ಲಿಸಲಾಗುವದೆಂದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್, ವಕ್ತಾರ ಟಿ.ಈ. ಸುರೇಶ್, ನೆರವಂಡ ಉಮೇಶ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ರು ರವೀಂದ್ರ ಹಾಗೂ ವೀರಾಜಪೇಟೆ ಬ್ಲಾಕ್ ಅಧ್ಯಕ್ಷ ಅಬ್ದುಲ್ ಸಲಾಂ ಉಪಸ್ಥಿತರಿದ್ದರು.