ಮಡಿಕೇರಿ, ಮಾ. 24: ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾಗಿ ಬಿ.ಎನ್. ಮುದ್ದುರಾಜು ನೇಮಕಗೊಂಡಿದ್ದಾರೆ.

ಈ ಸಂದರ್ಭ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ವಕ್ಫ್ ಬೋರ್ಡ್ ಅಧ್ಯಕ್ಷ ಕೆ.ಎ. ಯಾಕುಬ್, ಯುವ ಕಾಂಗ್ರೆಸ್ ಅಧ್ಯಕ್ಷ ಹನೀಫ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್, ವಿ.ಕೆ. ಸತೀಶ್, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಬೇಕಲ್ ರಮಾನಾಥ್, ಬೇಲೂರಯ್ಯ, ಮಡಿಕೇರಿ ನಗರ ಕಾರ್ಯದರ್ಶಿ ಆರ್.ಪಿ. ಚಂದ್ರಶೇಖರ್, ಪ್ರಕಾಶ್ ಹಾಗೂ ಕಾರ್ಯಕರ್ತರು ಹಾಜರಿದ್ದರು.