ಮಡಿಕೇರಿ, ಮಾ. 24: ತಾ. 25ರಂದು (ಇಂದು) ಲಯನ್ಸ್ ಕ್ಲಬ್ ವತಿಯಿಂದ ಸೋಮವಾರಪೇಟೆ ತಾಲೂಕು ಕುಂಬಾರಗಡಿಗೆ ಗ್ರಾಮದಲ್ಲಿ ಸಂತ್ರಸ್ತರಿಗೆ ನೆರವು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಅಪರಾಹ್ನ 3 ಗಂಟೆಗೆ ಜರುಗಲಿರುವ ಕಾರ್ಯಕ್ರಮದಲ್ಲಿ ಲಯನ್ ಕೆ. ದೇವರಾಜ್ ಭಂಡಾರಿ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ.