ಸೋಮವಾರಪೇಟೆ, ಮಾ. 24: ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಅವರ ಗೆಲವಿಗಾಗಿ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಐಗೂರು ಗ್ರಾಮದ ಮುತ್ತಪ್ಪ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ತಾಲೂಕು ಬಿಜೆಪಿ ಉಪಾಧ್ಯಕ್ಷ ಎಂ.ಎ. ಪ್ರಭಾಕರ್, ಪ್ರಧಾನ ಕಾರ್ಯದರ್ಶಿ ಮನುಕುಮಾರ್ ರೈ, ಐಗೂರು ಸ್ಥಾನೀಯ ಸಮಿತಿ ಅಧ್ಯಕ್ಷ ಮಚ್ಚಂಡ ಪ್ರಕಾಶ್, ಪ್ರಮುಖರಾದ ಟಿ.ಆರ್. ವಿಜಯ ಸೇರಿದಂತೆ ಇತರರು ಉಪಸ್ಥಿತರಿದ್ದರು.