ಕೂಡಿಗೆ, ಮಾ. 24: ಗ್ರಾಮಾಂತರ ಪ್ರದೇಶದ ಜನರಿಗೆ ಕೇಂದ್ರ ಸರ್ಕಾರ ಕೈಗೊಂಡಿರುವ ಜನಪರ ಯೋಜನೆಯನ್ನು ಸಮರ್ಪಕವಾಗಿ ತಿಳಿಯಲು ಗ್ರಾಮದ ಯುವಕರು ಮುಂದಾಗಬೇಕು ಎಂದು ಬಿ.ಜೆ.ಪಿ. ಜಿಲ್ಲಾಧ್ಯಕ್ಷ ಬಿ.ಬಿ. ಭಾರತೀಶ್ ತಿಳಿಸಿದರು.
ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲೇನಹಳ್ಳಿ ಗ್ರಾಮದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಅಧ್ಯಕ್ಷತೆಯನ್ನು ಕೂಡಿಗೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗಿರೀಶ್ ಕುಮಾರ ವಹಿಸಿದ್ದರು. ಶಕ್ತಿ ಕೇಂದ್ರದ ಅಧ್ಯಕ್ಷ ಶಿವನಾಂದ, ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜಳಾ, ಗ್ರಾಮ ಪಂಚಾಯಿತಿ ಸದಸ್ಯ ಹೆಚ್.ಎಸ್. ರವಿ, ತಾಲೂಕು ಬಿ.ಜೆ.ಪಿ. ಪ್ರಧಾನ ಕಾರ್ಯದರ್ಶಿ ಕೆ. ವರದ, ಯುವ ಮೋರ್ಚಾದ ಅಧ್ಯಕ್ಷ ಚಿಣ್ಣಪ್ಪ ಸೇರಿದಂತೆ ಪದಾಧಿಕಾರಿಗಳು, ಗ್ರಾಮಸ್ಥರು ಹಾಜರಿದ್ದರು.