ಮಡಿಕೇರಿ, ಮಾ. 25: ಕಾವೇರುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ - ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿರುವ ಮಾಜಿ ಸಂಸದ ಸಿ.ಹೆಚ್. ವಿಜಯಶಂಕರ್ ಅವರು ಮೈಸೂರಿನ ಕೋಟೆ ಆಂಜನೇಯ ದೇವಾಲಯದಿಂದ ಉಭಯ ಪಕ್ಷಗಳ ನಾಯಕರು, ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದರು. ಇಂದು ಬೆಳಿಗ್ಗೆ ಕುಟುಂಬ ಸಹಿತ ಚಾಮುಂಡಿಬೆಟ್ಟಕ್ಕೆ ತೆರಳಿ ದೇವಿಯ ಆಶೀರ್ವಾದ ಪಡೆದು ನಂತರ ಕೋಟೆ ಆಂಜನೇಯ ದೇವಾಲಯಕ್ಕೆ ಆಗಮಿಸಿ ಅಲ್ಲಿಯೂ ಪೂಜೆ ಸಲ್ಲಿಸಿದರು.ಮೆರವಣಿಗೆ ನಂತರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಮಾಜಿ ಶಾಸಕರುಗಳಾದ ವಾಸು, ಎಂ.ಕೆ. ಸೋಮಶೇಖರ್ ಸೇರಿದಂತೆ, ಉಭಯ ಪಕ್ಷಗಳ ಮುಖಂಡರು, ಕಾರ್ಯಕರ್ತರ ಬೃಹತ್ ಮೆರವಣಿ ಗೆಯೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದರು.ನಂತರ ಮಧ್ಯಾಹ್ನ 1.30ರ ವೇಳೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್, ಮಾಜಿ ಸಚಿವರುಗಳಾದ ತನ್ವೀರ್ ಸೇಟ್, ಹೆಚ್.ಸಿ. ಮಹದೇವಪ್ಪ ಅವರುಗಳೊಂದಿಗೆ ತೆರಳಿ ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್ ಅವರಿಗೆ ಎರಡು ಸೆಟ್‍ಗಳಲ್ಲಿ ನಾಮಪತ್ರ ಸಲ್ಲಿಸಿದರು.

11 ನಾಮಪತ್ರ ಸಲ್ಲಿಕೆ

ಮೈಸೂರು - ಕೊಡಗು ಲೋಕಸಭಾ ಕ್ಷೇತ್ರದಿಂದ ಇಂದು ಒಟ್ಟು 7 ಮಂದಿ

(ಮೊದಲ ಪುಟದಿಂದ) ಅಭ್ಯರ್ಥಿಗಳು 11 ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿಯಿಂದ ಪ್ರತಾಪ್ ಸಿಂಹ 2, ಮೈತ್ರಿಕೂಟದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿಜಯಶಂಕರ್ 2, ಪಕ್ಷೇತರರಾಗಿ ಎಂ. ಖಲೀಲ್ 1, ಎಂ. ಶ್ರೀನಿವಾಸ್ 1, ಕೆ.ಎಸ್. ಸೋಮಸುಂದರ 2, ವೆಂಕಟೇಶ್ ಡಿ. ನಾಯಕ 2, ಜಿ. ಲೋಕೇಶ್‍ಕುಮಾರ್ 1 ನಾಮಪತ್ರ ಸಲ್ಲಿಸಿದ್ದಾರೆ. ಇದುವರೆಗೆ ಈ ಕ್ಷೇತ್ರದಲ್ಲಿ ಒಟ್ಟು 22 ನಾಮಪತ್ರಗಳು ಸಲ್ಲಿಕೆಯಾಗಿವೆ.