ಸಿದ್ದಾಪುರ, ಮಾ. 25: ಅಕ್ರಮವಾಗಿ ಜೂಜಾಟದಲ್ಲಿ ತೊಡಗಿದ್ದ 9 ಮಂದಿಯನ್ನು ಸೆರೆಹಿಡಿಯುವಲ್ಲಿ ಸಿದ್ದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ.

ಸಿದ್ದಾಪುರದ ಎಂ.ಜಿ ರಸ್ತೆಯ ಮಾರುಕಟ್ಟೆಯಲ್ಲಿ ಅಕ್ರಮವಾಗಿ ಜೂಜಾಡುತ್ತಿರುವ ಬಗ್ಗೆ ಖಚಿತ ಸುಳಿವು ದೊರಕಿದ ಮೇರೆಗೆ ಸಿದ್ದಾಪುರ ಠಾಣಾಧಿಕಾರಿ ಮಹೇಶ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ಜೂಜಾಡುತ್ತಿದ್ದ 9 ಮಂದಿಯನ್ನು ಬಂಧಿಸಿದ್ದಾರೆ. ಜೂಜಾಟದಲ್ಲಿ ತೊಡಗಿದ್ದ ಸ್ಥಳೀಯ ನಿವಾಸಿಗಳಾದ ಸುಲೈಮಾನ್, ಸನಾಪ್, ಮಜೀದ್, ಶಾಜು, ಇಸ್ಮಾಯಿಲ್, ಪ್ರಶಾಂತ್, ಪ್ರವೀಣ್, ಬಾಷಾ, ಆಬಿದ್ ಇವರ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಬಂಧಿತರಿಂದ ರೂ. 8400 ವಶಪಡಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.