ಮಡಿಕೇರಿ ಮಾ.25 : ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಾ.28 ರಂದು ಮಡಿಕೇರಿಗೆ ಆಗಮಿಸಿ ಕಾರ್ಯಕರ್ತರ ಸಭೆÉ ನಡೆಸಲಿದ್ದಾರೆ ಎಂದು ತಿಳಿಸಿರುವ ಜಾತ್ಯತೀತ ಜನತಾದಳದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಅವರು, ಕೊಡಗು, ಮೈಸೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯ ಪರ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ತಾವು ಜೆಡಿಎಸ್ ಜಿಲ್ಲಾಧ್ಯಕ್ಷನಾಗಿ ಪದಗ್ರಹಣ ಮಾಡುವದಾಗಿ ಹೇಳಿದರು. ಮಾ.28 ರಂದು ಬೆಳಿಗ್ಗೆ 10 ಗಂಟೆÀಗೆ ಜನರಲ್ ತಿಮ್ಮಯ್ಯ ವೃತ್ತದಿಂದ ಮುಖ್ಯಮಂತ್ರಿಗಳ ಮೆರವಣಿಗೆ ನಡೆಯಲಿದ್ದು, ನಂತರ ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ಬಳಿಯ ಗೆಸ್ಟ್‍ಹೌಸ್ ಮೈದಾನದಲ್ಲಿ ಕಾರ್ಯಕರ್ತರ ಸಭೆÉ ನಡೆಯಲಿದೆ ಎಂದರು.

ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸಾಕ್ ಖಾನ್ ಮಾತನಾಡಿ, ವಿಧಾನಸಭಾ ಚುನಾವಣೆ ಮುಗಿದ ನಂತರ ಜಿಲ್ಲೆಯಲ್ಲಿ ಜೆಡಿಎಸ್‍ಗೆ ನಾಯಕತ್ವದ ಕೊರತೆ ಎದ್ದು ಕಾಣುತ್ತಿತ್ತು. ಆದರೆ, ಇದೀಗ ಎಲ್ಲರನ್ನು ಒಗ್ಗೂಡಿಸಿಕೊಂಡು ಹೋಗುವ ಶಕ್ತಿ ಹೊಂದಿರುವ ಕೆ.ಎಂ.ಗಣೇಶ್ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವದು ಸ್ವಾಗತಾರ್ಹವೆಂದರು.ಸುದ್ದಿಗೋಷ್ಠಿಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಕುಸುಮ್ ಕಾರ್ಯಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡೆನ್ನಿ ಬರೋಸ್, ಹಿಂದುಳಿದ ವರ್ಗಗಳ ಅಧ್ಯಕ್ಷ ಎನ್.ಸಿ.ಸುನಿಲ್ ಹಾಗೂ ಮಡಿಕೇರಿ ನಗರ ಮಹಿಳಾ ಘಟಕದ ಅಧ್ಯಕ್ಷೆ ಲೀಲಾ ಶೇಷಮ್ಮ ಉಪಸ್ಥಿತರಿದ್ದರು.