ಮಡಿಕೇರಿ, ಮಾ. 26: ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪಿ. ಅವರು ಮಂಗಳವಾರ ರಾಜಾಸೀಟು ಬಳಿ ವಾಹನ ನಿಲುಗಡೆ ಸಂಬಂಧ ಸ್ಥಳ ಪರಿಶೀಲಿಸಿದರು. ಪೌರಾಯುಕ್ತ ಎಂ.ಎಲ್. ರಮೇಶ್, ಪ್ರಾದೇಶಿಕ ಸಾರಿಗೆ ಕಚೇರಿಯ ಅಧೀಕ್ಷಕ ಶಿವಣ್ಣ, ನಗರಸಭೆ ಇಂಜಿನಿಯರ್ ನಾಗರಾಜು ಇತರರು ಇದ್ದರು.