ಪೆರಾಜೆ, ಮಾ. 26: ಇತ್ತೀಚಿಗೆ ನಿಧನರಾದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಾಲಚಂದ್ರ ಕಳಗಿ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಪೆರಾಜೆ ಅನ್ನಪೂರ್ಣೇಶ್ವರಿ ಕಲಾಮಂದಿರದಲ್ಲಿ ನಡೆಯಿತು.

ಅಪಾರ ಸಂಖ್ಯೆಯಲ್ಲಿ ಸೇರಿದ್ದ ಕಾರ್ಯಕರ್ತರು, ಅಭಿಮಾನಿಗಳ ಪರವಾಗಿ ಅಶೋಕ್ ಪೀಚೇ,ಹೊನ್ನಪ್ಪ ಅಮೆಚೂರ್, ಮುಕುಂದ ಮಾಸ್ತರ್ ಕುಂಬಳಚೇರಿ ಇವರುಗಳು ಕಳಗಿಯವರ ಜೊತೆ ಕಳೆದ ಸಮಯಗಳ ಕುರಿತು ಮಾತನಾಡಿದರು. ತಾಲೂಕು ಪಂಚಾಯತ್ ಸದಸ್ಯ ನಾಗೇಶ್ ಕುಂದಲ್ಪಾಡಿ ಮಾತನಾಡಿ, ಕಳಗಿ ಯವರ ದೂರದೃಷ್ಟಿ ಅವರ ರಾಜಕೀಯ ಪ್ರೀತಿ ಅವರನ್ನು ಚಿಕ್ಕ ವಯಸ್ಸಿನಲ್ಲೇ ದೊಡ್ಡ ಮಟ್ಟಕ್ಕೆ ತಲಪಿಸಿತ್ತು. ಸಂಪಾಜೆ ಗ್ರಾಮದ ಅಭಿವೃದ್ಧಿಯೇ ಅವರ ಶ್ರಮ ಸಾಧನೆಗೆ ಹಿಡಿದ ಕೈಗನ್ನಡಿ ಎಂದರು. ಕಾರ್ಯಕ್ರಮದಲ್ಲಿ ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಮೋನಪ್ಪ ಮಾಸ್ತರ್ ಕುಂಬಳಚೇರಿ, ಪಂಚಾಯತ್ ಉಪಾಧ್ಯಕ್ಷ ನಂಜಪ್ಪ ನಿಡ್ಯಮಲೆ ಉಪಸ್ಥಿತರಿದ್ದರು. ಕಾರ್ಯದರ್ಶಿ ಪ್ರಸನ್ನ ನೆಕ್ಕಿಲ ಸ್ವಾಗತಿಸಿ, ಪಂಚಾಯತ್ ಸದಸ್ಯ ಉದಯಚಂದ್ರ ಕುಂಬಳಚೇರಿ ವಂದಿಸಿದರು.