ಸೋಮವಾರಪೇಟೆ, ಮಾ. 26: ಲೋಕಸಭಾ ಚುನಾವಣೆಯಲ್ಲಿ ಬಳಕೆಯಾಗುವ ಮತಯಂತ್ರಗಳ ಬಗ್ಗೆ ಮತದಾರರಿಗೆ ಜಾಗೃತಿ ಮೂಡಿಸುವ ಕಾರ್ಯ ಸಮೀಪದ ಹಾನಗಲ್ಲು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆಯಿತು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವೀಶ್ ಮತ್ತು ಚುನಾವಣಾ ಕೆಲಸಕ್ಕೆ ನಿಯೋಜಿತರಾಗಿರುವ ಸಿಬ್ಬಂದಿಗಳು ಮತಯಂತ್ರದ ಬಗ್ಗೆ ಮತದಾರರಿಗೆ ಮಾಹಿತಿ ಒದಗಿಸಿದರು.