ಕುಶಾಲನಗರ, ಮಾ. 26: ಮಂಗಳೂರು ವಿಶ್ವವಿದ್ಯಾನಿಲಯದ ಚಿಕ್ಕ ಅಳುವಾರ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದಲ್ಲಿ 2018-19ನೇ ಸಾಲಿನಲ್ಲಿ ಮೊದಲ ಬಾರಿಗೆ ಎಲ್ಲಾ ವಿಭಾಗಗಳನ್ನು ಒಟ್ಟುಗೂಡಿಸಿಕೊಂಡು ಕ್ಯಾಂಪಸ್ ಫೆಸ್ಟ್ ವಿನೂತನ ಕಾರ್ಯಕ್ರಮವನ್ನು ತಾ. 27 ರಂದು (ಇಂದು) ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಪ್ರಭಾರ ನಿರ್ದೇಶಕರಾದ ಪ್ರೊ. ಮಂಜುಳಾ ಶಾಂತರಾಂ ತಿಳಿಸಿದ್ದಾರೆ.

ಅವರು ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೊಡಗು, ದಕ್ಷಿಣ ಕನ್ನಡ, ಹಾಸನ ಹಾಗೂ ಮೈಸೂರು ಇನ್ನಿತರೆ ಜಿಲ್ಲೆಗಳ ಪದವಿ ಕಾಲೇಜುಗಳಲ್ಲಿ ಪರೀಕ್ಷೆಗಳು ಪ್ರಾರಂಭವಾಗದೆ ಇರುವದರಿಂದ ಹಾಗೂ ಅಗತ್ಯವಿರುವ ಪ್ರತಿ ಕಾಲೇಜುಗಳ ವಿದ್ಯಾರ್ಥಿಗಳನ್ನು ಸದರಿ ಕಾರ್ಯಕ್ರಮಕ್ಕೆ ಆಹ್ವಾನಿಸಿ ಕಾರ್ಯಕ್ರಮ ನಡೆಸಲಾಗುವದು. ವಿದ್ಯಾರ್ಥಿಗಳಿಗೆ ವಿಭಾಗವಾರು ಸಂಬಂಧಪಟ್ಟಂತೆ ಕೆಲವು ಪಠ್ಯೇತರ ಚಟುವಟಿಕೆ, ಸ್ಪರ್ಧೆಗಳನ್ನು ಹಾಗೂ ವಿದ್ಯಾರ್ಥಿಗಳ ಗಮನ ಸೆಳೆಯುವಂತಹ ವಿಶೇಷ ಕಾರ್ಯಕ್ರಮವನ್ನು ಏರ್ಪಡಿಸಿ ಮುಂದಿನ 2019-20ನೇ ಶೈಕ್ಷಣಿಕ ವರ್ಷದಲ್ಲಿ ಎಲ್ಲಾ ವಿಭಾಗಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಪ್ರವೇಶಾತಿ ಮಾಡಿಸುವ ಉದ್ದೇಶವನ್ನು ಹೊಂದಿದೆ ಎಂದರು.

ವಿದ್ಯಾರ್ಥಿಗಳು ಕ್ಯಾಂಪಸ್‍ಗೆ ನೇರವಾಗಿ ಭೇಟಿ ನೀಡಿ, ಈ ಕಾರ್ಯಕ್ರಮದಲ್ಲಿ ಭಾಗವಹಿಸುವದರ ಜೊತೆಗೆ ಕೇಂದ್ರದಲ್ಲಿ ಈಗಾಗಲೇ ಲಭ್ಯವಿರುವ ವಿವಿಧ ವಿಭಾಗಗಳಲ್ಲಿನ ಶೈಕ್ಷಣಿಕ ಸೌಲಭ್ಯಗಳು, ಸಂಶೋಧನೆ, ನೂತನವಾಗಿ ಪ್ರಾರಂಭವಾಗುತ್ತಿರುವ ಕೋರ್ಸ್‍ಗಳ ವಿವರ ಹಾಗೂ ಸ್ನಾತಕೋತ್ತರ ಪ್ರವೇಶಾತಿ ಸೇರಿದಂತೆ ಇನ್ನಿತರೆ ಎಲ್ಲಾ ಮಾಹಿತಿಗಳನ್ನು ಪಡೆದುಕೊಳ್ಳುವದಕ್ಕೆ ಅವಕಾಶವಿದೆ ಎಂದರು.

ಕೇಂದ್ರದಲ್ಲಿ ಲಭ್ಯವಿರುವ ವಿವಿಧ ಸ್ನಾತಕೋತ್ತರ ಕೋರ್ಸ್‍ಗಳನ್ನು ಅಧ್ಯಯನ ಮಾಡಲು ಇಚ್ಛಿಸುವ ವಿದ್ಯಾರ್ಥಿಗಳು, ಯಾವದೇ ವಿಭಾಗಗಳಿಗೆ ನೇರವಾಗಿ ಭೇಟಿ ನೀಡಿ, ಅಲ್ಲಿನ ಬೋಧಕ ವೃಂದದೊಂದಿಗೆ ನೇರ ಸಮಾಲೋಚನೆ ನಡೆಸಿ ತಮಗೆ ಸೂಕ್ತವೆನಿಸಿದ ವಿಭಾಗವನ್ನು ಆಯ್ಕೆ ಮಾಡಿಕೊಳ್ಳುವದಕ್ಕೆ ಈ ಕಾರ್ಯಕ್ರಮ ಸಹಕಾರಿಯಾಗಲಿದೆ.

ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದಲ್ಲಿ ಈಗಾಗಲೇ ಒಟ್ಟು 10 ವಿಭಾಗಗಳಲ್ಲಿ ಅಧ್ಯಯನ ಕಾರ್ಯ ನಡೆಯುತ್ತಿದ್ದು, ಇದರ ಜೊತೆಗೆ ಒ.Sಛಿ. iಟಿ ಇಟಿviಡಿoಟಿmeಟಿಣಚಿಟ Sಛಿieಟಿಛಿe ಮತ್ತು ಒಚಿss ಅommuಟಿiಛಿಚಿಣioಟಿ ಚಿಟಿಜ ಎouಡಿಟಿಚಿಟism ನೂತನ ಕೋರ್ಸ್‍ಗಳನ್ನು ಈ ಕೇಂದ್ರದಲ್ಲಿ ಪ್ರಾರಂಭಿಸಲಾಗುವದು ಎಂದರು.

ಅಳುವಾರ ಕೇಂದ್ರದಲ್ಲಿ ಅಧ್ಯಯನ ಮಾಡುವ ವಿದ್ಯಾರ್ಥಿ, ವಿದ್ಯಾರ್ಥಿನಿಯರುಗಳಿಗೆ ಆಧುನೀಕೃತ ಪ್ರಯೋಗಾಲಯ, ಅಂತರ್ ಕಾಲೇಜು ಕ್ರೀಡಾ ಚಟುವಟಿಕೆಗಳು, ವಿದ್ಯಾರ್ಥಿನಿಲಯ, ಕ್ಯಾಂಟೀನ್ ಹಾಗೂ ವಾಹನ ಸೌಲಭ್ಯಗಳನ್ನು ಕಲ್ಪಿಸಿ ಕೊಡಲಾಗುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಅತ್ಯಾಧುನಿಕ ಸಿಸಿ ಕ್ಯಾಮೆರಾಗಳನ್ನು ಕೂಡ ಅಳವಡಿಸಲಾಗಿದ್ದು ವಿದ್ಯಾರ್ಥಿಗಳು ತಮ್ಮ ಉತ್ತಮ ಶೈಕ್ಷಣಿಕ ಭವಿಷ್ಯಕ್ಕಾಗಿ ನಮ್ಮ ಸ್ನಾತಕೋತ್ತರ ಕೇಂದ್ರದ ಸದುಪಯೋಗಪಡಿಸಿಕೊಳ್ಳುವಂತೆ ಅವರು ಕೋರಿದ್ದು ಹೆಚ್ಚಿನ ಮಾಹಿತಿಗಾಗಿ 0876-276485/474/479 ಸಂಪರ್ಕಿಸುವಂತೆ ಮಂಜುಳಾ ಶಾಂತರಾಮ್ ತಿಳಿಸಿದ್ದಾರೆ. ಗೋಷ್ಠಿಯಲ್ಲಿ ಸಂಸ್ಥೆಯ ಸೂಕ್ಷ್ಮಾಣುಜೀವಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಐ.ಕೆ. ಮಂಜುಳಾ, ದೈಹಿಕ ಶಿಕ್ಷಣ ಉಪನಿರ್ದೇಶಕ ಡಾ.ಟಿ. ಕೇಶವಮೂರ್ತಿ, ಜೀವರಸಾಯನಶಾಸ್ತ್ರ ವಿಭಾಗದ ಡಾ.ಚಂದ್ರಶೇಖರ ಜಿ. ಜೋಶಿ, ಕನ್ನಡ ಉಪನ್ಯಾಸಕ ಜಮೀರ್ ಅಹಮ್ಮದ್ ಇದ್ದರು.