ಮಡಿಕೇರಿ, ಮಾ. 26: ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಭಾಂಗಣದಲ್ಲಿ ತಾ. 28 ರಂದು ಪ್ರತಿಭೋತ್ಸವ, ಹಾಗೂ ತಾ. 29 ರಂದು 70ನೇ ಕಾಲೇಜು ವಾರ್ಷಿಕೋತ್ಸವ ಸಮಾರಂಭವು ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಟಿ.ಡಿ. ತಿಮ್ಮಯ್ಯ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾಲಯ ಕುಲಸಚಿವ ಪ್ರೊ. ವಿ.ರವೀಂದ್ರಾಚಾರಿ, ರೋಟರಿ ಜಿಲ್ಲೆ ಮಾಜಿ ಗವರ್ನರ್ ಸುರೇಶ್ ಚಂಗಪ್ಪ, ಮಂಗಳೂರು ವಿಶ್ವವಿದ್ಯಾನಿಲಯದ ವಿಶೇಷಾಧಿಕಾರಿ ಡಾ. ನಾಗಪ್ಪಗೌಡ ಆರ್, ಚಿಕ್ಕಅಳುವಾರದ ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರದ ನಿರ್ದೇಶಕಿ ಡಾ. ಮಂಜುಳಾ ಶಾಂತಾರಾಮ ಇತರರು ಪಾಲ್ಗೋಳ್ಳಲಿದ್ದಾರೆ.