ಸೋಮವಾರಪೇಟೆ, ಮಾ.26: ಸಮೀಪದ ಬಜೆಗುಂಡಿ ಗ್ರಾಮದ ಬ್ಲೂ ವಾರಿಯರ್ಸ್ ಸಂಘದ ವತಿಯಿಂದ ಏಪ್ರಿಲ್ 6 ಮತ್ತು 7ರಂದು ಜಿಲ್ಲಾ ಮಟ್ಟದ ಮುಕ್ತ ವಾಲಿಬಾಲ್ ಪಂದ್ಯಾಟವನ್ನು ಬಳಗುಂದ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಭಾಸ್ಕರ್ ತಿಳಿಸಿದ್ದಾರೆ.

ಪಂದ್ಯಾಟದಲ್ಲಿ ವಿಜೇತವಾಗುವ ತಂಡಗಳಿಗೆ ಪ್ರಥಮ ಬಹುಮಾನವಾಗಿ 9,999, ದ್ವಿತೀಯ ಬಹುಮಾನವಾಗಿ 5,555, ತೃತೀಯ ಬಹುಮಾನವಾಗಿ 3,333 ನಗದು ಬಹುಮಾನ ಮತ್ತು ಆಕರ್ಷಕ ಟ್ರೋಫಿ ನೀಡಲಾಗುವದು. ಇದರೊಂದಿಗೆ ವೈಯಕ್ತಿಕ ವಿಭಾಗದಲ್ಲೂ ಪ್ರಶಸ್ತಿಗಳನ್ನು ನೀಡಲಾಗುವದು. ಪಂದ್ಯಾಟದ ಬಗೆಗಿನ ಹೆಚ್ಚಿನ ಮಾಹಿತಿಗಾಗಿ ಮೊ. 9686820674, 9945150195 ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಭಾಸ್ಕರ್ ಮಾಹಿತಿ ನೀಡಿದ್ದಾರೆ.