ಮಡಿಕೇರಿ, ಮಾ. 26: ಕೊಡಗು ರಂಗಭೂಮಿ ಪ್ರತಿಷ್ಠಾನ, ಕರ್ನಾಟಕ ನಾಟಕ ಅಕಾಡೆಮಿ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಸಹಯೋಗದೊಂದಿಗೆ ರಂಗಕಲಾವಿದ ದಿ. ಮದ್ರಿರ ಸಂಜು ಅವರ ಜ್ಞಾಪಕಾರ್ಥ ತಾ. 27 ರಂದು ವಿಶ್ವ ರಂಗಭೂಮಿ ದಿನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಅಂದು ಸಂಜೆ 5.30 ಗಂಟೆಗೆ ಭಾರತೀಯ ವಿದ್ಯಾಭವನ ರಂಗಮಂದಿರದಲ್ಲಿ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತೀಯ ವಿದ್ಯಾಭವನ ಅಧ್ಯಕ್ಷ ಕೊಂಗಾಂಡ ಎಸ್. ದೇವಯ್ಯ ವಹಿಸುವರು. ಮುಖ್ಯ ಅತಿಥಿಗಳಾಗಿ ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ವಹಿಸುವರು.
ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಅಡ್ಡಂಡ ಕಾರ್ಯಪ್ಪ ಉಪಸ್ಥಿತಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಂಗ ಸಂಗೀತ ಕ್ಷೇತ್ರದಲ್ಲಿನ ಸಾಧನೆಗಾಗಿ ಗಾಯಕ ಚಕ್ಕೇರ ತ್ಯಾಗರಾಜ್ ಹಾಗೂ ರಂಗನಟಿ ಮಾದೇಟಿರ ವೀಣಾ ಬೆಳ್ಯಪ್ಪ ಅವರುಗಳನ್ನು ರಂಗ ಪ್ರತಿಷ್ಠಾನ ಪುರಸ್ಕಾರ -19 ಗೌರವ ಪ್ರಶಸ್ತಿ ನೀಡಿ ಗೌರವಿಸಲಾಗುವದು. ನಂತರ ಅಡ್ಡಂಡ ಕಾರ್ಯಪ್ಪ ರಚಿಸಿ, ನಿರ್ದೇಶಿಸಿರುವ ‘ಬದ್ಕ್’ ಕೊಡವ ನಾಟಕ ಪ್ರದರ್ಶನಗೊಳ್ಳಲಿದೆ.