ಮಡಿಕೇರಿ, ಮಾ. 26: ಲೋಕಸಭಾ ಚುನಾವಣೆ ಹಿನ್ನೆಲೆ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ವತಿಯಿಂದ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ತಾ. 27 ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ಸೋಮವಾರಪೇಟೆ ಮತ್ತು ವೀರಾಜಪೇಟೆಯಲ್ಲಿ ಆಶಾ ಕಾರ್ಯಕರ್ತರು ಹಾಗೂ ಎಎನ್‍ಎಂ ಅವರಿಗೆ ಇವಿಎಂ-ವಿವಿಪ್ಯಾಟ್ ಅರಿವು ಮತ್ತು ಜಾಗೃತಿ ಕಾರ್ಯಕ್ರಮ ನಡೆಯಲಿದೆ.