ಗೋಣಿಕೊಪ್ಪ ವರದಿ, ಮಾ. 27 : ತಾ. 28 ರಂದು ಮುಖ್ಯಮಂತ್ರಿ ಕುಮಾರಸ್ವಾಮಿ ಕೊಡಗಿಗೆ ಆಗಮಿಸುತ್ತಾರೆ ಎಂಬ ತಪ್ಪು ಮಾಹಿತಿ ನೀಡುವ ಮೂಲಕ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುವ ಪ್ರಯತ್ನದಲ್ಲಿ ಜೆಡಿಎಸ್ ಪಕ್ಷಕ್ಕೆ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕೆ.ಎಂ. ಗಣೇಶ್ ಅವರು ತೊಡಗಿಸಿಕೊಂಡಿ ದ್ದಾರೆ ಎಂದು ಜೆಡಿಎಸ್ ಹಿರಿಯ ಮುಖಂಡ ಕೆ.ಸಿ. ನಾಣಯ್ಯ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಕಾರ್ಯಕರ್ತ ಹೆಚ್. ಬಿ. ಗಣೇಶ್ ಮಾತನಾಡಿ, ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆಗೊಂಡವರನ್ನು ಜೆಡಿಎಸ್ ಅಧ್ಯಕ್ಷರನ್ನಾಗಿ ರಾಜ್ಯ ಅಧ್ಯಕ್ಷ ಹೆಚ್. ವಿಶ್ವನಾಥ್ ಅವರು ನೇಮಕ ಮಾಡಿದ್ದಾರೆ ಎಂದರು.
ಚುನಾವಣೆ ನಂತರ ಎಸ್.ಎಂ. ಚೆಂಗಪ್ಪ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡುವ ಭರವಸೆ ನೀಡಿರುವ ವರಿಷ್ಠರ ನಿರ್ದೇಶನದಂತೆ ಪ್ರಚಾರದಲ್ಲಿ ತೊಡಗಿಸಿಕೊಳ್ಳುತ್ತೇವೆ ಎಂದರು.