ಕೂಡಿಗೆ, ಮಾ. 27: ಮಂಗಳೂರು ವಿಶ್ವ ವಿದ್ಯಾನಿಲಯದ ಚಿಕ್ಕಅಳುವಾರ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದ ಸಮಾಜ ಕಾರ್ಯ ಅಧ್ಯಯನ ವಿಭಾಗದಲ್ಲಿ ವಿಶ್ವ ಸಮಾಜ ಕಾರ್ಯ ದಿನವನ್ನು ಆಚರಿಸಲಾಯಿತು.

ವೀರಾಜಪೇಟೆಯ ಕೊಡಗು ದಂತ ಮಹಾ ವಿದ್ಯಾಲಯದ ಸಾರ್ವಜನಿಕ ದಂತ ಆರೋಗ್ಯ ವಿಭಾಗದ ಮುಖ್ಯಸ್ಥ ಡಾ. ಜತೀಶ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಣಿಪಾಲ ವಿಶ್ವ ವಿದ್ಯಾನಿಲಯದ ಕುಲ ಸಚಿವ ಡಾ. ಮಧುಕರ್ ಮಲ್ಯ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದ ನಿರ್ದೇಶಕಿ ಪ್ರೊ. ಮಂಜುಳಾ ಶಾಂತರಾಮ್ ವಹಿಸಿದ್ದರು. ಕೇಂದ್ರದ ಹಲವು ವಿಭಾಗಗಳ ಉಪನ್ಯಾಸಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಎಂ.ಎಸ್.ಡಬ್ಲ್ಯೂ. ವಿದ್ಯಾರ್ಥಿನಿ ಶಾಲಿನಿ, ವಾಸವಿ, ಶ್ರೀವಿಷ್ಣು, ಗಾಯತ್ರಿ ಕಾರ್ಯಕ್ರಮ ನಿರ್ವಹಿಸಿದರು. ವಿಶ್ವ ಸಮಾಜ ಕಾರ್ಯದಿನದ ಅಂಗವಾಗಿ ಕೇಂದ್ರದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ಉಚಿತ ದಂತ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.