ಮಡಿಕೇರಿ, ಮಾ.27: ಲೋಕಸಭಾ ಚುನಾವಣೆ ಸಂಬಂಧ ಮಡಿಕೇರಿ ವಿಧಾನಸಭಾ ಕ್ಷೇತ್ರದ ಮತಗಟ್ಟೆಗಳಿಗೆ ಮತಗಟ್ಟೆ ಅಧಿಕಾರಿಗಳಾಗಿ ನೇಮಕಗೊಂಡಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ತಾ. 28 ರಂದು (ಇಂದು) ಮಡಿಕೇರಿ ಸೆಂಟ್ ಜೋಸೆಫ್ ಕಾನ್ವೆಂಟ್‍ನಲ್ಲಿ ಮೊದಲ ಹಂತದ ತರಬೇತಿ ನಡೆಯಲಿದೆ. ತರಬೇತಿಗೆ ತಮ್ಮ ಖeಛಿiಠಿieಟಿಣ ಬ್ಯಾಂಕ್ ಖಾತೆ ಸಂಖ್ಯೆ (IಈSಅ ಅoಜe) ನೊಂದಿಗೆ ಮತದಾರರ ಗುರುತಿನ ಚೀಟಿ ಸಂಖ್ಯೆಯ ಮಾಹಿತಿಯೊಂದಿಗೆ ಹಾಜರಾಗಬೇಕು. ಗೈರು ಹಾಜರಾಗುವ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆ 1951ರ ಪ್ರಕಾರ ಕ್ರಮಕೈಗೊಳ್ಳಲಾಗುವದು ಎಂದು ಮಡಿಕೇರಿ ತಹಶೀಲ್ದಾರ್ ತಿಳಿಸಿದ್ದಾರೆ.