ಕೂಡಿಗೆ, ಮಾ. 27: ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2018-19ನೇ ಸಾಲಿನ ಕಾಲೇಜು ವಾರ್ಷಿಕೋತ್ಸವ ಸಮಾರಂಭ ತಾ. 30 ರಂದು ನಡೆಯಲಿದೆ. ಕಾರ್ಯಕ್ರಮದ ಪ್ರಧಾನ ಭಾಷಣಕಾರರಾಗಿ ಮೂಡುಬಿದಿರೆಯ ಚಿಂತಕ ಹಾಗೂ ಅಂಕಣಕಾರ ಅರವಿಂದ ಚೊಕ್ಕಾಡಿ, ಮುಖ್ಯ ಅತಿಥಿಗಳಾಗಿ ಹಳೇ ವಿದ್ಯಾರ್ಥಿ ಸಂಘ ಕಾರ್ಯದರ್ಶಿ ಸುಗುರಾಜ್ ಡಿ.ಕೆ. ಆಗಮಿಸಲಿದ್ದಾರೆ. ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಹೆಚ್.ಬಿ. ಲಿಂಗಮೂರ್ತಿ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ.