ಸೋಮವಾರಪೇಟೆ, ಮಾ. 27: ಮಡಿಕೇರಿ ಗಾಳಿಬೀಡಿನಲ್ಲಿರುವ ಜವಹಾರ ನವೋದಯ ವಿದ್ಯಾಲಯದ ವತಿಯಿಂದ ಜವಾಹರ ನವೋದಯ ಪ್ರವೇಶ ಪರೀಕ್ಷೆಗೆ ಅನುಕೂಲವಾಗುವಂತೆ ಉಚಿತ ಪರೀಕ್ಷಾಪೂರ್ವ ತರಬೇತಿ ಕಾರ್ಯಾಗಾರವನ್ನು ತಾ. 31 ರಂದು ಇಲ್ಲಿನ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಿದ್ಯಾಲಯದ ಪ್ರಕಟಣೆ ತಿಳಿಸಿದೆ.

ಅಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಕಾರ್ಯಾಗಾರ ನಡೆಯಲಿದ್ದು, ಅರ್ಜಿ ಸಲ್ಲಿಸಿದ ಮಕ್ಕಳು ಇದರ ಸದುಪಯೋಗ ಪಡಿಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.