ಮಡಿಕೇರಿ, ಮಾ.27: ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಪಿ.ಶಿವರಾಜು ಅವರು ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಕಳೆದ ಒಂದು ತಿಂಗಳಿನಿಂದ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಟಿ.ಯೋಗೇಶ್ ಅವರು ಗುಲ್ಬರ್ಗಾ ಜಿಲ್ಲೆಗೆ ವರ್ಗಾವಣೆಗೊಂಡಿದ್ದಾರೆ.