ನಾಪೆÇೀಕ್ಲು, ಮಾ. 28: ಮಡಿಕೇರಿ ತಾಲೂಕಿನ ಎರಡನೇ ದೊಡ್ಡ ಪಟ್ಟಣ ನಾಪೆÇೀಕ್ಲುವಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಜ್ಞ ವೈದ್ಯರಿಲ್ಲದೆ, ರೋಗಿಗಳು, ಸಾರ್ವಜನಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದುದರಿಂದ ಸಂಬಂಧಿಸಿದವರು ಕೂಡಲೇ ತಜ್ಞ ವೈದ್ಯರು ಮತ್ತು ವೈದ್ಯಾಧಿಕಾರಿ ನೇಮಕಕ್ಕೆ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಈ ಹಿಂದೆ ವೈದ್ಯಾಧಿಕಾರಿ ವರ್ಗಾವಣೆಗೊಂಡ ಬಳಿಕ ಇಲ್ಲಿಗೆ ಇನ್ನೂ ವೈದ್ಯಾಧಿಕಾರಿ ನೇಮಕ ವಾಗಿಲ್ಲ. ಇಲ್ಲಿ ದಿನಂಪ್ರತಿ 250 ರಿಂದ 300 ಹೊರ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು, ಎಲ್ಲರಿಗೂ ಚಿಕಿತ್ಸೆ ನೀಡಲು ಇಲ್ಲಿರುವ ವೈದ್ಯ ಡಾ. ಮದನ್ ಮೋಹನ್ ಹರಸಾಹಾಸ ಪಡುತ್ತಿದ್ದಾರೆ. ರಾತ್ರಿ ಪಾಳಿಯಲ್ಲಿ ಡಾ. ಶಿವಕುಮಾರ್ ಕಾರ್ಯನಿರ್ವ ಹಿಸುತ್ತಿದ್ದಾರೆ. ಆದರೂ ತಜ್ಞ ವೈದ್ಯರಿಲ್ಲದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ರೋಗಿಗಳನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಇಲ್ಲಿನ ವೈದ್ಯಾಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಾರೆ. ಹೆಚ್ಚಿನ ರೋಗಿಗಳು ಬರುತ್ತಿರುವ ಕಾರಣ ಅವರಿಗೆ ಸಮಸ್ಯೆಯಾಗುತ್ತಿದೆ. ಆದುದರಿಂದ ಕೂಡಲೇ ತಜ್ಞ ವೈದ್ಯರ ನೇಮಕಕ್ಕೆ ಸಂಬಂಧಿಸಿದವರು ಕ್ರಮ ಕೈಗೊಳ್ಳ ಬೇಕು ಎಂದು ಬೊಳ್ಳೆಪಂಡ ಕರುಂಬ ಯ್ಯ ಹಾಗೂ ವಾಹನ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಅಬ್ದುಲ್ ರಜಾಕ್ ಒತ್ತಾಯಿಸಿದ್ದಾರೆ.