ಸೋಮವಾರಪೇಟೆ, ಮಾ. 28: ಇಲ್ಲಿನ ಸರ್ಕಾರಿ ಬಸ್ ನಿಲ್ದಾಣದಲ್ಲಿರುವ ಸಾರ್ವಜನಿಕ ಶೌಚಾಲಯ ಬಂದ್ ಆಗಿದ್ದು, ಸಾರ್ವಜನಿಕರು ಶೌಚಾಲಯ ಬಳಕೆಗೆ ಪರದಾಟ ಅನುಭವಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಶೌಚಾಲಯದ ಬಾಗಿಲಿಗೆ ದಿಢೀರ್ ಬೀಗ ಜಡಿದಿದ್ದು, ಪ್ರಯಾಣಿಕರು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿ ಉಂಟಾಗಿದೆ. ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯವಾಗಿದ್ದು, ಹೊರಭಾಗದಿಂದ ವಿದ್ಯಾರ್ಥಿಗಳು ಪಟ್ಟಣದ ಪರೀಕ್ಷಾ ಕೇಂದ್ರಗಳಿಗೆ ಆಗಮಿಸುತ್ತಿದ್ದು, ತೊಂದರೆ ಅನುಭವಿಸುತ್ತಿದ್ದಾರೆ. ಸಂಬಂಧಿಸಿದವರು ತಕ್ಷಣ ಈ ಬಗ್ಗೆ ಗಮನಹರಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.