ಮಡಿಕೇರಿ, ಮಾ.29: ಆಲೂರು ಸಿದ್ದಾಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಹಾಗೂ ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಿರುವದರಿಂದ ಕ.ವಿ.ಪ್ರ.ನಿ.ನಿ. ರವರ ಕೋರಿಕೆಯಂತೆ ತಾ. 31 ರಂದು (ಇಂದು) ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವದು. ಆದ್ದರಿಂದ ಹೊನ್ನೆಕೊಪ್ಪಲು, ಹೊಸಗುತ್ತಿ, ಮಾಲಂಬಿ, ಗೋಣಿಮರೂರು, ಸಿದ್ದಲಿಂಗಪುರ, ಆಲೂರು ಸಿದ್ದಾಪುರ, ಗಣಗೂರು ಹಾರೋಹಳ್ಳಿ ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.