ಸೋಮವಾರಪೇಟೆ,ಮಾ.31: ಎಸ್‍ಯುಸಿಐ ಕಮ್ಯೂನಿಸ್ಟ್ ಪಕ್ಷದ ಚುನಾವಣಾ ಪ್ರಚಾರ ಸಭೆ ಏಪ್ರಿಲ್ 1ರಂದು (ಇಂದು) ಇಲ್ಲಿನ ಮಹಿಳಾ ಸಮಾಜದಲ್ಲಿ ಪೂರ್ವಾಹ್ನ 11 ಗಂಟೆಗೆ ನಡೆಯಲಿದೆ ಎಂದು ಆಯೋಜಕರಾದ ಸುಭಾಷ್ ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕ್ಷೇತ್ರದಿಂದ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯೂನಿಸ್ಟ್) ಪಕ್ಷದಿಂದ ಸ್ಪರ್ಧಿಸಿರುವ ಅಭ್ಯರ್ಥಿ ಪಿ.ಎಸ್. ಸಂದ್ಯಾ ಸೇರಿದಂತೆ ಇತರ ಪ್ರಮುಖರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.