ಕೂಡಿಗೆ, ಮಾ. 31: ಕೂಡಿಗೆಯ ಸದ್ಗುರು ಅಪ್ಪಯ್ಯಸ್ವಾಮಿ ಪ್ರೌಢಶಾಲೆಯಲ್ಲಿ ಗ್ರೂಪ್ ಡಿ ನೌಕರರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಹೆಚ್.ಕೆ. ಸೋಮಣ್ಣ ಅವರನ್ನು ಶಾಲೆಯ ಆಡಳಿತ ಮಂಡಳಿ, ಶಾಲಾ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು, ಶಿಕ್ಷಕ ವೃಂದದವರು ಸನ್ಮಾನಿಸಿ, ಬೀಳ್ಕೊಡಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ವ್ಯವಸ್ಥಾಪಕ ಎಂ.ಬಿ. ಮೊಣ್ಣಪ್ಪ ವಹಿಸಿದ್ದರು. ಈ ಸಂದರ್ಭ ಆಡಳಿತ ಮಂಡಳಿ ಸದಸ್ಯರಾದ ಬಿ.ವಿ. ಅರುಣ್‍ಕುಮಾರ್, ಪೋಷಕ ಪರಿಷತ್ತಿನ ಅಧ್ಯಕ್ಷ ಕೆ.ಟಿ. ವೆಂಕಟೇಶ್, ಮುಖ್ಯೋಪಾಧ್ಯಾಯಿನಿ ಎ.ಬಿ. ಸ್ವಾತಿ, ಶಿಕ್ಷಕರಾದ ಸುಲೋಚನ, ದುರ್ಗೇಶ್, ಸೋಮಯ್ಯ, ಕುಸುಮ, ನರೇಶ್, ಸುರೇಶ್, ಪುಷ್ಪ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.