ಮಡಿಕೇರಿ, ಮಾ.31: ಲೋಕಸಭಾ ಸಾರ್ವತ್ರಿಕ ಚುನಾವಣೆ-2019ರ ಸಂಬಂಧ ಸ್ವೀಪ್ ಚಟುವಟಿಕೆಯಲ್ಲಿ ಜಿಲ್ಲಾ ರಾಯಭಾರಿಯಾಗಿ ಹಿರಿಯ ನಾಗರಿಕರಾದ ಭಾಗೀರಥಿ ಹುಲಿತಾಳ ಮತ್ತು ವಿಶೇಷಚೇತನರಾದ ಎಸ್.ಕೆ.ಈಶ್ವರಿ ಅವರು ಆಯ್ಕೆಯಾಗಿದ್ದಾರೆ ಎಂದು ಸ್ವೀಪ್ ಸಮಿತಿ ಅಧ್ಯಕ್ಷರಾದ ಕೆ.ಲಕ್ಷ್ಮಿಪ್ರಿಯಾ ಅವರು ತಿಳಿಸಿದ್ದಾರೆ.
ಸ್ವೀಪ್ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ರಾಯಭಾರಿಯಾಗಿ ಆಯ್ಕೆಯಾಗಿರುವ ಅವರು ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿಯೊಂದಿಗೆ ಸಹಕರಿಸಿ ಯಶಸ್ವಿಗೊಳಿಸಲು ತಿಳಿಸಿದ್ದಾರೆ.