ಗೋಣಿಕೊಪ್ಪ ವರದಿ, ಏ. 30: ಹಳ್ಳಿಗಟ್ಟು ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಎಲೆಕ್ರ್ಟಾನಿಕ್ಸ್ ಮತ್ತು ಕಮ್ಯೂನಿಕೇಶನ್ ವಿದ್ಯಾರ್ಥಿಗಳಿಗೆ ಎಲಿಂಟ್ ಲ್ಯಾಬ್ಸ್ ಸಂಸ್ಥೆ ಸಹಯೋಗದಲ್ಲಿ ಏರ್ಪಡಿಸಿದ್ದ ಅಡ್ವಾನ್ಸ್ಡ್ ಎಂಬೆಡೆಡ್ ಸಿಸ್ಟಮ್ ಯೂಸಿಂಗ್ ಎನ್‍ಐ ಲ್ಯಾವ್ಯೂ ತರಬೇತಿ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳು ಹಲವು ತಂತ್ರಜ್ಞಾನಗಳ ಅರಿವು ಪಡೆದುಕೊಂಡರು.

ಸಂಪನ್ಮೂಲ ವ್ಯಕ್ತಿಯಾಗಿ ಬೆಂಗಳೂರು ಎಲಿಂಟ್ ಲಾಬ್ಸ್ ಸಂಸ್ಥೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಯ್ ಗೌಡ ತರಬೇತಿ ನೀಡಿದರು. ಕೊಡವ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ರಾಕೇಶ್ ಪೂವಯ್ಯ ಉದ್ಘಾಟಿಸಿದರು. ಈ ಸಂದರ್ಭ ಪ್ರಾಂಶುಪಾಲ ಡಾ. ಪಿ.ಸಿ. ಕವಿತ, ಎಲೆಕ್ರ್ಟಾನಿಕ್ಸ್ ಮತ್ತು ಕಮ್ಯೂನಿಕೇಶನ್ ವಿಭಾಗದ ಮುಖ್ಯಸ್ಥ ಡಾ. ಎಸ್. ಎಸ್. ದಿವಾಕರ್ ಉಪಸ್ಥಿತರಿದ್ದರು. ತರಬೇತಿಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ ಮಾಡಲಾಯಿತು.