ಗೋಣಿಕೊಪ್ಪಲು, ಏ. 1: ಕಾಫಿ, ಕರಿಮೆಣಸು ಆಮದು ನೀತಿಯಿಂದ ಕೊಡಗು ಜಿಲ್ಲೆಯ ರೈತರು ಎದುರಿಸುತ್ತಿರುವ ಆರ್ಥಿಕ ಸಂಕಷ್ಟ, ಸವಾಲುಗಳು ಎಂಬ ವಿಷಯದಲ್ಲಿ ವಿಚಾರ ಸಂಕಿರಣ ಕಾರ್ಯಕ್ರಮ ತಾ.2 ರಂದು (ಇಂದು) ಗೋಣಿಕೊಪ್ಪಲು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಭಾಂಗಣದಲ್ಲಿ ನಡೆಯಲಿದೆ.

ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆಯ ಕೊಡಗು ಜಿಲ್ಲಾ ಅಧ್ಯಕ್ಷ ಕಾಡ್ಯಮಾಡ ಮನುಸೋಮಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯ ರೈತ ಸಂಘದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.