ಮಡಿಕೇರಿ, ಮಾ.31: ಮಡಿಕೇರಿ ನಗರ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ಲೋಕಸಭಾ ಮೈತ್ರಿ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಅವರ ಗೆಲುವಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸುವಂತೆ ವಿಧಾನ ಪರಿಷತ್ ಸದಸ್ಯರಾದ ವೀಣಾಅಚ್ಚಯ್ಯ ಕರೆ ನೀಡಿದರು.
ಪಕ್ಷದ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಮಾತನಾಡಿ ವಿಜಯಶಂಕರ್ ಅವರ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು. ಸಭೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಸಿ.ನಾಣಯ್ಯ, ಕೆಪಿಸಿಸಿ ಸದಸ್ಯ ಟಿ.ಪಿ. ರಮೇಶ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ರು ರವೀಂದ್ರ, ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಬ್ದುಲ್ ರಜಾóಕ್, ಪ್ರಮುಖರಾದ ಜಾನ್ಸನ್ ಮತ್ತಿತರರು ಹಾಜರಿದ್ದರು.