ಸೋಮವಾರಪೇಟೆ, ಏ. 1: ಸಮೀಪದ ಗೌಡಳ್ಳಿ ಗ್ರಾಮದ ಹಿಂದೂ ಗೆಳೆಯರ ಬಳಗದ ಆಶ್ರಯದಲ್ಲಿ ಏ. 6 ಮತ್ತು 7ರಂದು ಗೌಡಳ್ಳಿಯ ಬಿಜಿಎಸ್ ಶಾಲಾ ಮೈದಾನದಲ್ಲಿ ಮುಕ್ತ ಫುಟ್ಬಾಲ್ ಪಂದ್ಯಾಟ ಆಯೋಜಿಸಲಾಗಿದೆ ಎಂದು ಗೆಳೆಯರ ಬಳಗದ ಪ್ರಸನ್ನ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಮತ್ತು ಫುಟ್ಬಾಲ್ ಪಂದ್ಯಾವಳಿಯ ಬಗ್ಗೆ ಗ್ರಾಮೀಣ ಭಾಗದಲ್ಲಿ ಹೆಚ್ಚು ಆಸಕ್ತಿ ಬೆಳೆಯುವಂತೆ ಮಾಡುವ ಉದ್ದೇಶದಿಂದ ಮೂರನೇ ವರ್ಷದ ಪಂದ್ಯಾವಳಿ ಆಯೋಜಿಸಲಾಗಿದೆ ಎಂದರು.

ಪಂದ್ಯಾಟದಲ್ಲಿ ಸ್ಥಳೀಯ ಆಟಗಾರರೊಂದಿಗೆ ಅಂತರಾಜ್ಯ ಸೇರಿದಂತೆ ವಿದೇಶೀ ಆಟಗಾರರೂ ಸಹ ಭಾಗವಹಿಸಲಿದ್ದಾರೆ. ಪ್ರಥಮ ಸ್ಥಾನ ಪಡೆಯುವ ತಂಡಕ್ಕೆ ರೂ. 1ಲಕ್ಷ ನಗದು ಮತ್ತು ಆಕರ್ಷಕ ಟ್ರೋಫಿ, ದ್ವಿತೀಯ ಸ್ಥಾನ ಪಡೆಯುವ ತಂಡಕ್ಕೆ ರೂ. 50 ಸಾವಿರ ನಗದು ಮತ್ತು ಟ್ರೋಫಿ ಸೇರಿದಂತೆ ವೈಯುಕ್ತಿಕ ವಿಭಾಗದಲ್ಲೂ ಪ್ರಶಸ್ತಿಗಳನ್ನು ನೀಡಲಾಗುವದು ಎಂದರು.

ಪ್ರತಿ ತಂಡದಲ್ಲಿ 11+3 ಆಟಗಾರರಿಗೆ ಅವಕಾಶವಿದ್ದು, ತಾ. 1.4.2019ರೊಳಗೆ ತಂಡದ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಮೊದಲು ಬಂದ 16 ತಂಡಗಳಿಗೆ ಮಾತ್ರ ಅವಕಾಶವಿದ್ದು, ಕಡ್ಡಾಯವಾಗಿ ಆಟಗಾರರು ಕ್ರೀಡಾಸಮವಸ್ತ್ರ ಧರಿಸಬೇಕು ಎಂದು ಮಾಹಿತಿ ನೀಡಿದರು. ಪಂದ್ಯಾಟದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ 8762111404,9844482112 ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಪ್ರಸನ್ನ ತಿಳಿಸಿದರು. ಗೋಷ್ಠಿಯಲ್ಲಿ ಹಿಂದೂ ಗೆಳೆಯರ ಬಳಗದ ಕಾರ್ಯದರ್ಶಿ ಅಜ್ಜಳ್ಳಿ ನವೀನ್, ಖಜಾಂಚಿ ಜಿತೇಂದ್ರ, ಸದಸ್ಯರಾದ ಜಿ.ಪಿ. ಸುನಿಲ್, ಜಿ.ಆರ್. ಕೇಶವ ಅವರುಗಳು ಉಪಸ್ಥಿತರಿದ್ದರು.