ಗೋಣಿಕೊಪ್ಪಲು ವರದಿ, ಎ. 1: ಹಿರಿಯ ರಾಜಕಾರಣಿ, ಕೊಡಗು ಜಿಲ್ಲಾ ಪರಿಷತ್‍ನ ಪ್ರಥಮ ಅಧ್ಯಕ್ಷರಾಗಿದ್ದ ಜಮ್ಮಡ ಎ. ಕರುಂಬಯ್ಯ (84) ಅವರು ಇಂದು ನಿಧನರಾಗಿದ್ದಾರೆ. ಮೃತರು ಪತ್ನಿ ಸೇರಿದಂತೆ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.ವಯೋ ಸಾಮಾನ್ಯ ಅನಾರೋಗ್ಯದಿಂದ ಬಳಲುತ್ತಿದ್ದ ಇವರು, ಕೈಕೇರಿಯ ಸ್ವಗೃಹದಲ್ಲಿ ಇಂದು ಬೆಳಿಗ್ಗೆ 8.45ರ ಸುಮಾರಿಗೆ ನಿಧನರಾದರು. ಅಂತ್ಯಕ್ರಿಯೆ ಜಮ್ಮಡ ಕುಟುಂಬದ ಸ್ಮಶಾನದಲ್ಲಿ ನೆರವೇರಿತು. ಅಂತ್ಯಕ್ರಿಯೆ ಸಂದರ್ಭ ವಿವಿಧ ಪಕ್ಷಗಳ ಮುಖಂಡರುಗಳು ಹಾಗೂ ಅಭಿಮಾನಿಗಳು ಪಾಲ್ಗೊಂಡು ಅಂತಿಮ ನಮನ ಸಲ್ಲಿಸಿದರು.ಶಾಸಕರುಗಳಾದ ಕೆ.ಜಿ. ಬೋಪಯ್ಯ, ಅಪ್ಪಚ್ಚುರಂಜನ್, ಎಂಎಲ್ಸಿಗಳಾದ ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಲೋಕಸಭಾ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿಜಯಶಂಕರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ. ಮಂಜುನಾಥ್, ಮಾಜಿ ಎಂಎಲ್ಸಿ ಅರುಣ್ ಮಾಚಯ್ಯ ಹಾಗೂ ಇತರ ಮುಖಂಡರುಗಳು ಅಂತಿಮ ದರ್ಶನ ಪಡೆದರು.

ನೇರ ನಡೆ ನುಡಿಯ ರಾಜಕಾರಣಿ ಎಂದು ಹೆಸರು ಪಡೆದಿದ್ದ ಕರುಂಬಯ್ಯ ಅವರು, ಕೊಡಗು ಜಿಲ್ಲಾ ಪರಿಷತ್‍ನ ಮೊದಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ತಾಲೂಕು ಅಭಿವೃಧ್ಧಿ ಮಂಡಳಿ ಸದಸ್ಯರಾಗಿ 5 ವರ್ಷ ಸೇವೆ ಸಲ್ಲಿಸಿದ್ದರು. 1987ರಲ್ಲಿ ಜಿಲ್ಲಾ ಪರಿಷತ್ ಸದಸ್ಯರಾಗಿ ಅಯ್ಕೆಯಾಗಿ, 1992 ರವರೆಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಕಾಂಗ್ರೆಸ್ ಮುಖಂಡರಾಗಿ ನಂತರ ರಾಮಕೃಷ್ಣ ಹೆಗಡೆ ಅವರ ಲೋಕಶಕ್ತಿ ಪಕ್ಷದಲ್ಲಿದ್ದರು. ನಂತರ ಆ ಪಕ್ಷದ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿ, ಮತ್ತೆ ಕಾಂಗ್ರೆಸ್‍ಗೆ ಹಿಂತಿರುಗಿದ್ದರು.

ಸಂತಾಪ ಸಭೆ: ಮೃತರ ಗೌರವಾರ್ಥ ಪಕ್ಷದ ವತಿಯಿಂದ ಕಾಂಗ್ರೆಸ್ ಕಚೇರಿಯಲ್ಲಿ ಸಂತಾಪ ಸಭೆ ನಡೆಯಿತು.

(ಮೊದಲ ಪುಟದಿಂದ) ಕರುಂಬಯ್ಯ ಅವರು ಪಕ್ಷಕ್ಕಾಗಿ ದುಡಿದ ಅವರ ಕಾರ್ಯವನ್ನು ಹಿರಿಯರು ನೆನೆಪಿಸಿಕೊಂಡರು.

ಈ ಸಂದÀರ್ಭ ನಗರ ಅಧ್ಯಕ್ಷ ಕುಲ್ಲಚಂಡ ಗಣಪತಿ, ಕಾಂಗ್ರೆಸ್ ವಕ್ತಾರ ಟಾಟು ಮೊಣ್ಣಪ್ಪ, ಪ್ರಮುಖರುಗಳಾದ ಬಿ.ಎನ್. ಪ್ರಕಾಶ್, ಅಜಿತ್ ಅಯ್ಯಪ್ಪ, ವಿನಯ್, ಟಿಪ್ಪು ಬಿದ್ದಪ್ಪ, ಎ.ಜೆ. ಬಾಬು, ಅರುಣ್ ಮಾಚಯ್ಯ, ಪಲ್ವಿನ್ ಪೂಣಚ್ಚ, ಕೊಲ್ಲೀರ ಬೋಪಣ್ಣ, ಲಾಲಾ ಅಪ್ಪಣ್ಣ, ವಿಶು, ಬಾನಂಡ ಪ್ರಥ್ಯು, ತೀತಿರ ಧರ್ಮಜ, ಮಂಜುಳ ಇತರರು ಪಾಲ್ಗೊಂಡಿದ್ದರು.

ಗೋಣಿಕೊಪ್ಪಲು ಪಟ್ಟಣದಲ್ಲಿ 1 ಗಂಟೆಗಳ ಕಾಲ ಅಂಗಡಿ-ಮುಂಗಟ್ಟು ಮುಚ್ಚಿ ಗೌರವ ನೀಡಲಾಯಿತು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್, ವಿಧಾನ ಪರಿಷತ್ ಸದಸ್ಯೆ ವೀಣಾಅಚ್ಚಯ್ಯ, ಲೋಕಸಭಾ ಮೈತ್ರಿ ಅಭ್ಯರ್ಥಿ ಸಿ.ಹೆಚ್. ವಿಜಯಶಂಕರ್, ಕೆಪಿಸಿಸಿ ಸದಸ್ಯರಾದ ಕೆ.ಪಿ. ಚಂದ್ರಕಲಾ, ಟಿ.ಪಿ. ರಮೇಶ್, ಹಿರಿಯ ಉಪಾಧ್ಯಕ್ಷ ಮಿಟ್ಟುಚಂಗಪ್ಪ, ಕಾರ್ಯದರ್ಶಿ ಟಿ.ಎಂ. ಶಾಹಿದ್, ಯಂ.ಸಿ. ನಾಣಯ್ಯ, ಯುವ ಕಾಂಗ್ರೆಸ್ ಅಧ್ಯಕ್ಷÀ ಹನೀಫ್ ಸಂಪಾಜೆ, ಜಿ.ಪಂ ಸದಸ್ಯೆ ಸುನಿತಾ ಮಂಜುನಾಥ್, ಲೀಲಾವತಿ, ಬ್ಲಾಕ್ ಅಧ್ಯಕ್ಷರುಗಳಾದ ಶಶಿಧರ್, ಸಲಾಂ, ಬಿ.ಎಸ್. ರಮಾನಾಥ್ ಅಪ್ರು ರವೀಂದ್ರ, ಪಕ್ಷದ ವಕ್ತಾರರಾದ ಸುರೇಶ್, ನೆರವಂಡ ಉಮೇಶ್, ಮುನೀರ್, ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ನಟೇಶ್, ರೆಡ್ ಕ್ರಾಸ್ ಸಂಸ್ಥೆಯ ರಾಜ್ಯಸಭಾಧ್ಯಕ್ಷ ನಾಗಣ್ಣ, ಪ್ರಧಾನ ಕಾರ್ಯದರ್ಶಿ ಪ್ರಶಾಂತಿ ಚಂದ್ರಶೇಖರ್, ಉಪಾಧ್ಯಕ್ಷ ವಿ.ಎಲ್.ಎಸ್. ಕುಮಾರ್, ಕೊಡಗು ಜಿಲ್ಲಾ ರೆಡ್ ಕ್ರಾಸ್ ಸಭಾಧ್ಯಕ್ಷ ಬಿ.ಕೆ. ರವೀಂದ್ರ ರೈ, ಪ್ರಧಾನ ಕಾರ್ಯದರ್ಶಿ ಎಚ್.ಆರ್.ಮುರಳಿ, ರೆಡ್ ಕ್ರಾಸ್ ಕೊಡಗು ಘಟಕದ ಉಪಾಧ್ಯಕ್ಷ ಅನಿಲ್ ಎಚ್.ಟಿ. ಜೋಸೇಫ್ ಸ್ಯಾಮ್, ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್ ಸಂತಾಪ ಸೂಚಿಸಿದ್ದಾರೆ.