ಸೋಮವಾರಪೇಟೆ, ಏ. 1: ಮಡಿಕೇರಿ ಗಾಳಿಬೀಡಿನಲ್ಲಿರುವ ಜವಾಹರ ನವೋದಯ ವಿದ್ಯಾಲಯದ ವತಿಯಿಂದ ಜವಾಹರ ನವೋದಯ ಪ್ರವೇಶ ಪರೀಕ್ಷೆಗೆ ಅನುಕೂಲವಾಗುವಂತೆ ಉಚಿತ ಪರೀಕ್ಷಾಪೂರ್ವ ತರಬೇತಿ ಕಾರ್ಯಾಗಾರ ಇಲ್ಲಿನ ಪತ್ರಿಕಾ ಭವನದಲ್ಲಿ ನಡೆಯಿತು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ಡಾ. ಸದಾಶಿವ ಪಲ್ಲೆದ್ ಮಾತನಾಡಿ, ವಿದ್ಯಾರ್ಥಿ ಗಳಲ್ಲಿ ಶ್ರದ್ಧೆ, ಛಲ ಹಾಗೂ ಪರಿಶ್ರಮ ವಿದ್ದಲ್ಲಿ ಯಾವದೇ ಸಾಧನೆ ಮಾಡಲು ಸಾಧ್ಯ. ಆದ್ದರಿಂದ ಎಲ್ಲ ವಿದ್ಯಾರ್ಥಿಗಳು ಶಿಕ್ಷಣದ ಅವಧಿ ಯಲ್ಲಿ ಹೆಚ್ಚಿನ ಆಸಕ್ತಿಯಿಂದ ಆಭ್ಯಾಸ ಮಾಡಬೇಕೆಂದರು. ನವೋದಯ ವಿದ್ಯಾಲಯದ ಕನ್ನಡ ಶಿಕ್ಷಕರಾದ ಎಲ್.ಎಚ್. ರವಿ ಮಾತನಾಡಿ, ದೇಶದಲ್ಲಿ ಒಟ್ಟು 640 ನವೋದಯ ವಿದ್ಯಾಸಂಸ್ಥೆಗಳಿದ್ದು, ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಶಿಕ್ಷಣ ನೀಡಲಾಗುತ್ತಿದೆ ಎಂದರು.

ಕಾರ್ಯಾಗಾರದ ಅಧ್ಯಕ್ಷತೆ ಯನ್ನು ನಗರ ಪತ್ರಕರ್ತರ ಸಂಘದ ಅಧ್ಯಕ್ಷ ಡಿ.ಪಿ. ಲೋಕೇಶ್ ವಹಿಸಿದ್ದರು. ವೇದಿಕೆಯಲ್ಲಿ ನಿವೃತ್ತ ಯೋಧರ ಸಂಘದ ಅಧ್ಯಕ್ಷ ಬಿ.ಆರ್. ಈರಪ್ಪ, ಪೋಷಕರಾದ ರೂಪಾ ಸತೀಶ್, ಶಾಲೆಯ ಹಿಂದಿ ಶಿಕ್ಷಕ ಅರುಣ್ ಕುಮಾರ್, ವಿಜ್ಞಾನ ಶಿಕ್ಷಕ ಎಸ್.ಪಿ. ವಿಜೇಂದ್ರಕುಮಾರ್ ಮತ್ತಿತರರು ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಮೋಹನ್ ಮತ್ತು ವಿಜೇಂದ್ರಕುಮಾರ್ ಉಪಸ್ಥಿತರಿದ್ದರು.