ಮಡಿಕೇರಿ, ಏ. 1: ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ತಾ.2 ರಂದು (ಇಂದು) ಬೆಳಗ್ಗೆ 8.30 ಗಂಟೆಗೆ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಟ್ರೋಫಿ ವಿತರಣೆ ಕಾರ್ಯಕ್ರಮ ನಡೆಯಲಿದೆ.
ನಿವೃತ್ತ ಪೊಲೀಸ್ ಅಧೀಕ್ಷಕರಾದ ಎ.ಕೆ.ಸುರೇಶ್, ನಿವೃತ್ತ ಏರ್ ಮಾರ್ಷಲ್ ಕೆ.ಸಿ.ಕಾರ್ಯಪ್ಪ, ನಿವೃತ್ತ ಪೊಲೀಸ್ ನಿರೀಕ್ಷಕರಾದ ಎನ್.ಟಿ. ಮಹದೇವ, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸುಮನ್ ಡಿ.ಪೆನ್ನೇಕರ್ ಇತರರು ಪಾಲ್ಗೊಳ್ಳಲಿದ್ದಾರೆ.