ಸೋಮವಾರಪೇಟೆ, ಏ. 2: ನಡೆದಾಡುವ ದೇವರೆಂದೇ ಹೆಸರಾಗಿದ್ದ ಕಾಯಕಯೋಗಿ ಡಾ.ಶಿವಕುಮಾರ ಸ್ವಾಮೀಜಿಗಳ 112ನೇ ಜನ್ಮದಿನಾಚರಣೆ ಹಾಗು ಗುರುವಂದನಾ ಕಾರ್ಯಕ್ರಮವನ್ನು ತಾಲೂಕಿನ ವಿವಿಧ ಭಾಗಗಳಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಮಹೇಶ್ ತಿಳಿಸಿದ್ದಾರೆ.

ತಾ.4ರಂದು ಗುರುವಾರ ಬೆಳಿಗ್ಗೆ 10.30ಕ್ಕೆ ಶನಿವಾರಸಂತೆ ಗುಡುಗಳಲೆ ಜಾತ್ರಾ ಮೈದಾನದಲ್ಲಿರುವ ಶ್ರೀ ಬಸವೇಶ್ವರ ದೇವಾಲಯದಲ್ಲಿ ಕಾರ್ಯಕ್ರಮ ನಡೆಯಲಿದೆ. ಸಂಜೆ 6.30ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಸೋಮವಾರಪೇಟೆ ವಿರಕ್ತ ಮಠಾಧೀಶರಾದ ಶ್ರೀ ವಿಶ್ವೇಶ್ವರ ಸ್ವಾಮೀಜಿ, ಕಿರಿಕೊಡ್ಲಿ ಮಠಾಧೀಶರಾದ ಸದಾಶಿವ ಸ್ವಾಮೀಜಿ, ಬಸವಪಟ್ಟಣದ ತೋಟಂದಾರ್ಯ ಸಂಸ್ಥಾನ ಮಠಾಧೀಶರಾದ ಸ್ವತಂತ್ರ ಬಸವಲಿಂಗ ಶಿವಯೋಗಿಗಳು, ಮುದ್ದಿನಕಟ್ಟೆ ಮಠಾಧೀಶರಾದ ಅಭಿನವ ಸಿದ್ದಲಿಂಗಶಿವಾಚಾರ್ಯ ಸ್ವಾಮೀಜಿ, ಕೊಡ್ಲಿಪೇಟೆ ಕಲ್ಲುಮಠದ ಮಠಾಧೀಶರಾದ ಮಹಾಂತ ಸ್ವಾಮೀಜಿಗಳು ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ತಾ.7ರ ಭಾನುವಾರ ಸಂಜೆ 6.30ಕ್ಕೆ ಗೆಜ್ಜೆಹಣಕೋಡು ಗ್ರಾಮದ ಶ್ರೀ ಸೋಮೇಶ್ವರ ದೇವಾಲಯದ ಆವರಣದಲ್ಲಿ ಗುರುವಂದನಾ ಕಾರ್ಯಕ್ರಮ ನಡೆಯಲಿದ್ದು, ವಿವಿಧ ಮಠಾಧೀಶರು ಪಾಲ್ಗೊಳ್ಳಲಿದ್ದಾರೆ ಎಂದು ಮಹೇಶ್ ತಿಳಿಸಿದ್ದಾರೆ.