ಸೋಮವಾರಪೇಟೆ, ಏ. 3: ಜಿಲ್ಲಾ ಶರಣ ಸಾಹಿತ್ಯ ಪರಿಷತ್ ವತಿಯಿಂದ ತಾ. 4ರಂದು (ಇಂದು) ಕಾಯಕಯೋಗಿ ಡಾ.ಶಿವಕುಮಾರ ಸ್ವಾಮೀಜಿಗಳ 112ನೇ ಜನ್ಮದಿನಾಚರಣೆ ಹಾಗೂ ಗುರುವಂದನಾ ಕಾರ್ಯಕ್ರಮ ತಾಲೂಕಿನ ವಿವಿಧ ಭಾಗಗಳಲ್ಲಿ ನಡೆಯಲಿದೆ.
ತಾ.4ರಂದು ಬೆಳಿಗ್ಗೆ 10.30ಕ್ಕೆ ಶನಿವಾರಸಂತೆ ಗುಡುಗಳಲೆ ಜಾತ್ರಾ ಮೈದಾನದಲ್ಲಿರುವ ಶ್ರೀ ಬಸವೇಶ್ವರ ದೇವಾಲಯದಲ್ಲಿ, ಸಂಜೆ 6.30ಕ್ಕೆ ಸೋಮವಾರಪೇಟೆಯ ಶ್ರೀ ಬಸವೇಶ್ವರ ದೇವಾಲಯದಲ್ಲಿ, ತಾ.7ರಂದು ಸಂಜೆ 6.30ಕ್ಕೆ ಗೆಜ್ಜೆಹಣಕೋಡು ಗ್ರಾಮದ ಶ್ರೀ ಸೋಮೇಶ್ವರ ದೇವಾಲಯದ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದೆ.
ಸೋಮವಾರಪೇಟೆ ವಿರಕ್ತ ಮಠಾಧೀಶರಾದ ಶ್ರೀ ವಿಶ್ವೇಶ್ವರ ಸ್ವಾಮೀಜಿ, ಕಿರಿಕೊಡ್ಲಿ ಮಠಾಧೀಶರಾದ ಸದಾಶಿವ ಸ್ವಾಮೀಜಿ, ಬಸವಪಟ್ಟಣದ ತೋಟಂದಾರ್ಯ ಸಂಸ್ಥಾನ ಮಠಾಧೀಶರಾದ ಸ್ವತಂತ್ರ ಬಸವಲಿಂಗ ಶಿವಯೋಗಿಗಳು, ಮುದ್ದಿನಕಟ್ಟೆ ಮಠಾಧೀಶರಾದ ಅಭಿನವ ಸಿದ್ಧಲಿಂಗಶಿವಾಚಾರ್ಯ ಸ್ವಾಮೀಜಿ, ಕೊಡ್ಲಿಪೇಟೆ ಕಲ್ಲುಮಠದ ಮಠಾಧೀಶರಾದ ಮಹಾಂತ ಸ್ವಾಮೀಜಿಗಳು ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.