ಮಡಿಕೇರಿ, ಏ. 2: ಇಲ್ಲಿನ ಕಾನ್ವೆಂಟ್ ರಸ್ತೆಯಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಿಯ 13ನೇ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು. ಬೆಳಿಗ್ಗೆಯಿಂದ ವಿವಿಧ ಪೂಜಾದಿಕಾರ್ಯ, ಹೋಮ, ಹವನಗಳೊಂದಿಗೆ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಮಹಾಪೂಜೆಯ ಬಳಿಕ ಪ್ರಸಾದ ವಿನಿಯೋಗದೊಂದಿಗೆ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಅತ್ಯಧಿಕ ಸಂಖ್ಯೆಯಲ್ಲಿ ಭಕ್ತ ಜನರು ಪಾಲ್ಗೊಂಡು ದೇವಿಯ ಪ್ರಸಾದ ಸ್ವೀಕರಿಸಿದರು.