ಸೋಮವಾರಪೇಟೆ, ಏ. 3: ಲೋಕಸಭಾ ಚುನಾವಣೆ ಹಿನ್ನೆಲೆ ತಾಲೂಕು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರ ಸಭೆ ಇಲ್ಲಿನ ಮಾನಸ ಸಭಾಂಗಣದಲ್ಲಿ ತಾಲೂಕು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಂಜುಳಾ ಹರೀಶ್ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಹಿಂದೆ ರಾಜ್ಯದಲ್ಲಿ ಆಡಳಿತ ನಡೆಸಿದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮತ್ತು ಮೈತ್ರಿ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಪ್ರತಿಯೋರ್ವರಿಗೂ ಮಾಹಿತಿ ನೀಡುವ ಮೂಲಕ ಪಕ್ಷದ ಸಂಘಟನೆಯನ್ನು ಬಲಪಡಿಸಬೇಕು ಎಂದು ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲಾಧ್ಯಕ್ಷ ಕೆ.ಕೆ. ಮಂಜುನಾಥ್‍ಕುಮಾರ್ ಕರೆ ನೀಡಿದರು. ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ. ಲೋಕೇಶ್, ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಪಿ. ಚಂದ್ರಕಲಾ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ಕಾಂಗ್ರೆಸ್ ವಕ್ತಾರ ಟಿ.ಈ. ಸುರೇಶ್, ಕೆಪಿಸಿಸಿ ಸದಸ್ಯೆ ತಾಹೀರಾ, ಚಂದ್ರಾವತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.