ಸಿದ್ದಾಪುರ, ಏ. 3: ಮ್ಯೆಸೂರು-ಕೊಡಗು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ವಿಜಯಶಂಕರ್ ಸಿದ್ದಾಪುರ ಪಾಲಿಬೆಟ್ಟ, ಚನ್ನಯ್ಯನ ಕೋಟೆ, ಹುಂಡಿ ಸೇರಿದಂತೆ ಹಲವೆಡೆ ಕಾರ್ಯಕರ್ತರೊಂದಿಗೆ ತೆರಳಿ ಮತಯಾಚನೆ ಮಾಡಿದರು.

ಸಿದ್ದಾಪುರ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತ ಸಭೆ ನಡೆಸಿದ ನಂತರ ಪಟ್ಟಣದಲ್ಲಿ ಮತಯಾಚನೆ ಮಾಡಿದರು. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯ ಮತದಾರರು ಬದಲಾವಣೆ ಬಯಸಿದ್ದಾರೆ ರಾಜ್ಯ ಸರಕಾರದ ಸಾಧನೆಗಳಿಂದ ಜಿಲ್ಲೆ ಅಭಿವೃದ್ಧಿ ಕಂಡಿದೆ. ಸರಕಾರದ ಸಾಧನೆಗಳ ಬಗ್ಗೆ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮಾಹಿತಿ ನೀಡಿ ಎಂದರು. ಜಿಲ್ಲೆಯ ಜನರ ಸಮಸ್ಯೆಗಳಿಗೆ ಸದಾ ಸ್ಪಂದಿಸುವ ನಿಟ್ಟಿನಲ್ಲಿ ಜಿಲ್ಲೆಯ ತಾಲೂಕು ಕೇಂದ್ರಗಳಿಲ್ಲಿ ಕಚೇರಿ ಪ್ರಾರಂಭ ಮಾಡುತ್ತೇನೆ ಎಂದರು

ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಕೆ.ಕೆ. ಮಂಜುನಾಥ್‍ಕುಮಾರ್, ಬ್ಲಾಕ್ ಕಾಂಗ್ರೆಸ್ ಆರ್.ಕೆ. ಸಲಾಂ, ಮಾಜಿ ಅಧ್ಯಕ್ಷ ಉಸ್ಮಾನ್ ಹಾಜಿ, ಕಾರ್ಯದರ್ಶಿ ಜಾನ್ಸನ್, ಯುವ ಕಾಂಗ್ರೆಸ್ ಅಧ್ಯಕ್ಷ ಹನೀಫ್ ಸಂಪಾಜೆ, ವಲಯ ಕಾಂಗ್ರೆಸ್ ಅಧ್ಯಕ್ಷ ಮೂಸ, ಜಿಲ್ಲಾ ಪಂಚಾಯಿತಿ ಸದಸ್ಯೆ ಲೀಲಾವತಿ, ತಾ.ಪಂ. ಸದಸ್ಯೆ ಕಾವೇರಮ್ಮ, ಚಿನ್ನಮ್ಮ, ಯೋಗೇಶ್, ಕಾಳಪ್ಪ ಮತ್ತಿತರರು ಇದ್ದರು.