ಶನಿವಾರಸಂತೆ, ಏ. 4: ಶನಿವಾರಸಂತೆ ಸಮೀಪದ ಗುಂಡೂರಾವ್ ಬಡಾವಣೆಯ ನಿವಾಸಿ, ಕೂಲಿಕಾರ್ಮಿಕ ಕೆ.ಬಿ. ಮಧು ಎಂಬಾತ ಬುಧವಾರ ಸಂಜೆ ನಾಕಲಗೂಡು ಗ್ರಾಮದ ಬಸ್ ತಂಗುದಾಣದ ಬಳಿ ಬರುತ್ತಿದ್ದಾಗ ಹಿಂಬದಿಯಿಂದ ಬಂದ ಬೈಕ್ (ಕೆಎ-12, ಎಸ್-2503) ಡಿಕ್ಕಿಯಾಗಿದ್ದು, ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಯಾಳುವನ್ನು ಶನಿವಾರಸಂತೆ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.