ಮೂರ್ನಾಡು, ಏ.4 : ಹೊದ್ದೂರು ಕುಂಬಾರಕೇರಿಯ ಶ್ರೀ ವೆಂಕಟರಮಣ ಮತ್ತು ಶ್ರೀ ದೇವಿ ದೇವಾಲಯದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ತಾ. 6ರಂದು ಪೂಜಾ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 10 ಗಂಟೆಯಿಂದ ಪೂಜಾ ಕಾರ್ಯಕ್ರಮ ನಡೆಯಲಿದ್ದು, 10 ಗಂಟೆಗೆ ಸ್ವಾಮಿಯ ದರ್ಶನ, 4 ಗಂಟೆಗೆ ದೇವರ ಜಳಕ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ ಎಂದು ದೇವಾಲಯ ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.